ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಶೀಘ್ರ ಅನುಷ್ಠಾನಗೊಳಿಸಿ : ಎಂ.ಆರ್.ಶಿವರಾಜ್

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 07 : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಘೋಷಣೆ ರಾಜ್ಯ ಸರ್ಕಾರ ಮಾಡಿದ್ದು, ವಿಳಂಬ ಮಾಡದೇ ಅನುಷ್ಠಾನಗೊಳಿಸುವ ಮೂಲಕ ನೌಕರ ವರ್ಗಕ್ಕೆ ಅನುಕೂಲ ಕಲ್ಪಿಸಬೇಕೆಂದು ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಆರ್.ಶಿವರಾಜ್ ಆಗ್ರಹಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ವಾಹನ ಚಾಲಕರು, ಲೋಡರ್ಸ್ ಕ್ಲೀನರ್ಸ್ ಒಳಚರಂಡಿ ಕಾರ್ಮಿಕರನ್ನು ನೇರಪಾವತಿಗೆ ತರುವುದಾಗಿ ಘೋಷಿಸಿರುವ ಸರ್ಕಾರದ ನಿರ್ಧಾರ ಸ್ವಾಗತರ್ಹ. 2017ರಲ್ಲಿ ಪೌರಕಾರ್ಮಿಕರನ್ನು ನೇರಪಾವತಿಗೆ ತಂದಾಗ ಕಸದ ವಾಹನ ಚಾಲಕರು, ಲೋಡರ್ಸ್ ಕ್ಲೀನರ್ಸ್ ಯೂಜಿಡಿ ಕಾರ್ಮಿಕರನ್ನು ನೇರಪಾವತಿಗೆ ತರದೆ ತಾರತಮ್ಯ ಎಸಗಲಾಗಿತ್ತು. ಇದರ ವಿರುದ್ಧ ಸಂಘ ನಡೆಸಿದ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು ಸಂತಸ ತಂದಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸದ ವಿಲೇವಾರಿಯಲ್ಲಿ ತೊಡಗಿರುವ ಸ್ಯಾನಿಟರಿ ಸೂಪರ್ ವೈಸರು, ಸ್ಮಶಾನ ಕಾವಲುಗಾರರು ಮತ್ತು ನೀರು ಸರಬರಾಜು ಸಹಾಯಕರನ್ನು ನೇರಪಾವತಿಯಿಂದ ಹೊರಗಿಡದೆ ಅವರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ.

suddionenews

Recent Posts

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

10 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

10 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

10 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

10 hours ago

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆ ; ಯಾರೀ ನೈನಾರ್ ನಾಗೇಂದ್ರನ್..?

    ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…

11 hours ago

ಗುತ್ತಿಗೆದಾರರ ಸಂಘದ ಆರೋಪ : ಸಚಿವಸಂಪುಟದಲ್ಲಿ ಏನೆಲ್ಲಾ ಚರ್ಚೆಯಾಯ್ತು ?

    ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ…

11 hours ago