Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಗರ್‌ಹುಕುಂ ಸಾಗುವಳಿದಾರರಿಗೆ ಒನ್ ಟೈಮ್ ಸೆಟ್ಲ್‌ಮೆಂಟ್ ಮಾಡಿ: ಚಿತ್ರದುರ್ಗದಲ್ಲಿ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ಬಗರ್‍ಹುಕುಂ ಸಾಗುವಳಿದಾರರಿಗೆ ಒನ್ ಟೈಮ್ ಸೆಟ್ಲ್‍ಮೆಂಟ್ ಆಗಲೇಬೇಕೆಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯಲ್ಲಿ ಬಗರ್‍ಹುಕುಂ ಸಾಗುವಳಿ ಮಾಡುತ್ತಿರುವ ಬಡ ಕುಟುಂಬಗಳು ಫಾರಂ ನಂ. 50, 53, 57 ರಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ ಭೂಮಿಗಾಗಿ ಕಾಯುತ್ತಿವೆ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಹಲವು ದಶಕಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ವಂಚಿಸುತ್ತಲೆ ಕಾಲ ಕಳೆಯುತ್ತಿವೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರುಗಳ ಅಧ್ಯಕ್ಷತೆಯಲ್ಲಿ ಭೂಮಿ ಮಂಜೂರಾತಿಗಾಗಿ ಸಮಿತಿಗಳು ರಚನೆಯಾಗಿದ್ದರೂ ಕಾಲ ಕಾಲಕ್ಕೆ ಸಭೆಗಳು ನಡೆಯುತ್ತಿಲ್ಲವಾದ್ದರಿಂದ ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಗಳು ನಿವಾರಣೆಯಾಗಿಲ್ಲ. ಕೂಡಲೆ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ನೀಡದಿದ್ದರೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಬೇಕಾಗುತ್ತದೆಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಸಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಂಚಾಲಕ ಕುಮಾರ್ ಸಮತಳ ಮಾತನಾಡಿ ಅರಣ್ಯ ಕಂದಾಯ ಭೂಮಿಗಳ ಜಂಟಿ ಸರ್ವೆ ನಡೆಸಬೇಕು. ಭೂ ಮಂಜೂರಾತಿಯಾಗಿ ಸಾಗುವಳಿ ಚೀಟಿಗಳನ್ನು ಪಡೆದಿರುವವರಿಗೆ ಪಹಣಿ ವಿತರಿಸಬೇಕು. ನಿವೇಶನ ಹಾಗು ವಸತಿ ರಹಿತರಿಗೆ ವಸತಿ ಸೌಲಭ್ಯಗಳನ್ನು ಒದಗಿಸಬೇಕು. ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವ ಬಗರ್‍ಹುಕುಂ ಸಾಗುವಳಿದಾರರಿಗೆಲ್ಲಾ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಹನುಮಂತಣ್ಣ ಗೋನೂರು, ಡಿ.ಎಸ್.ಎಸ್.ಮುಖಂಡ ಬಿ.ರಾಜಣ್ಣ,  ಕರಿಯಪ್ಪ ಈಚಘಟ್ಟ, ಪುರುಷೋತ್ತಮ್, ಅಂಜಿನಪ್ಪ, ನೀಲಮ್ಮ, ಅಕ್ಕಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now