Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ

---Advertisement---

 

ಚಿತ್ರದುರ್ಗ, ಫೆ. 13 : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬ ಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.
ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.
ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.

ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್ ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

 

ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ. ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ. ಯಾವುದೇ ಪೆÇಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು. ಪೆÇಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು. ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ. ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment