ಚಿತ್ರದುರ್ಗ.ಫೆ.19: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿಪಾದಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿ ಬರಹ ಇರುವ ಬಸವಣ್ಣನವರ ನೂತನ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.
ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಸರ್ಕಾರ ಬಸವ ತತ್ವಗಳಿಗೆ ಹೆಚ್ಚಿನ ಮಹತ್ವ ನೀಡಿದೆ. ಬಸವಣ್ಣ ಒಂದು ಜಾತಿಗೆ ಸೀಮಿತರಾದವರಲ್ಲ. ನಾಡಿನ ಎಲ್ಲಾ ವರ್ಗದ ಜನರಿಂದ ಪೂಜನೀಯವಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದಿಂದ ಅನುಮೋದಿಸಿದ್ದ ಬಸವಣ್ಣನವರ ಅಧಿಕೃತ ಭಾವಚಿತ್ರದ ಅಡಿಯಲ್ಲಿ ಇನ್ನು ಮುಂದೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿ ಬರಹ ಇರಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾಚಿತ್ರದ ಕಡ್ಡಾಯ ಅಳವಡಿಕೆಗೆ ಸೂಚನೆಯನ್ನು ನೀಡಲಾಗಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜ ಮುಖಂಡರಾದ ಮಹಡಿ ಶಿವಮೂರ್ತಿ, ಮಹೇಶ್, ಕೆಇಬಿ ಷಣ್ಮುಖಪ್ಪ, ದಯಾನಂದ,
ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಸೇರಿದಂತೆ ರಾಷ್ಟ್ರೀಯ ಬಸವ ದಳ, ಪಂಚಮಸಾಲಿ ಲಿಂಗಾಯಿತ ಮುಖಂಡರು ಉಪಸ್ಥಿತರಿದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…