Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ಜಾರಿ : ಸಚಿವ ಡಿ.ಸುಧಾಕರ್

Facebook
Twitter
Telegram
WhatsApp

 

ಚಿತ್ರದುರ್ಗ.ಫೆ.18:   ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣ ಬಡವರು, ದೀನದಲಿತರು ಸೇರಿದಂತೆ ಎಲ್ಲ ವರ್ಗದವರಿಗೂ ತಲುಪಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

     
ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಬೋರಪ್ಪ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ‘ಐಮಂಗಲ ಹೋಬಳಿ ಮಟ್ಟದ ಸಮಾವೇಶ” ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಶೇ.98ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಸಮರ್ಥವಾಗಿ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನೂ 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತು ನೀಡಲಾಗುವುದು ಎಂದರು.

ನಮ್ಮ ಸರ್ಕಾರ ಚುನಾವಣೆಗೂ ಮುನ್ನ ಜನರಿಗೆ ನೀಡಿದ ಆಶ್ವಾಸನೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದ ಅವರು, ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಜತೆಗೆ ಅಭಿವೃದ್ಧಿ ಕಾರ್ಯವನ್ನೂ ಮಾಡಲಾಗುವುದು. ಈಚೆಗೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 100 ಕೋಟಿ ಅನುದಾನ ನೀಡಲಾಗಿದೆ. ಅವಶ್ಯಕತೆ ಇರುವ ಕಡೆ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.

ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ  65,019 ಕುಟುಂಬಗಳು, ಗೃಹಲಕ್ಷ್ಮೀ ಯೋಜನೆಯಡಿ 66,014 ಫಲಾನುಭವಿಗಳು, ಗೃಹಜ್ಯೋತಿ ಯೋಜನೆಯಡಿ 64,778 ಕುಟುಂಬಗಳು ಪ್ರಯೋಜನ ಪಡೆದಿವೆ. ಶಕ್ತಿ ಯೋಜನೆಯಡಿ ಮಹಿಳೆಯರು ಸರ್ಕಾರದ ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಯುವನಿಧಿ ಯೋಜನೆಯಡಿ 517ಕ್ಕೂ ಹೆಚ್ಚು ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದ ಅವರು, ತಾಂತ್ರಿಕ ಕಾರಣಗಳಿಂದ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳು ಹೊರಗುಳಿದಿದ್ದು, ಅಂತಹವರು ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಇಲಾಖೆಗೆ ತಲುಪಿಸಿದರೆ ನಿಯಮಾನುಸಾರ ಕ್ರಮವಹಿಸಿ ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಫಲಾನುಭವಿ ಐಮಂಗಲ ಹೋಬಳಿ ಪಾಲವ್ವನಹಳ್ಳಿಯ ಶಾರದಮ್ಮ ತನ್ನ ಅನಿಸಿಕೆ ವ್ಯಕ್ತಪಡಿಸಿ, ವಯಸ್ಸಾದ  ಕಾರಣಕ್ಕೆ ಕೂಲಿ ಕೆಲಸಕ್ಕೂ ನನ್ನನ್ನು ಯಾರು ಕರೆಯುತ್ತಿರಲಿಲ್ಲ. ನನ್ನ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಜಮೀನು ಸಹ ಇಲ್ಲ. ಹಾಗಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ.  ಮನೆಯ ಯಜಮಾನಿಗೆ ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಔಷಧೋಪಚಾರಕ್ಕೆ ಬಳಸುತ್ತಿದ್ದೇನೆ. ಇದರಿಂದ ಸಾಕಷ್ಟು ಅನುಕೂಲವಾಗಿದೆ ಎಂದರು.

ನನ್ನ ತವರು ಮನೆ ಹಾಸನ ಜಿಲ್ಲೆ. ಯಾವುದಾದರೂ ಕಾರ್ಯಕ್ರಮಗಳಿಗೆ ಕರೆದಾಗ ಹಣದ ಸಮಸ್ಯೆಯಿಂದಾಗಿ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಶಕ್ತಿ ಯೋಜನೆಯಡಿ ಆಧಾರಕಾರ್ಡ್ ಇಟ್ಟುಕೊಂಡು ಉಚಿತವಾಗಿ 4 ಬಾರಿ ಹಾಸನ ಜಿಲ್ಲೆಗೆ ಹೋಗಿ ಬಂದಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು. ಹಸಿದವರಿಗೆ ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‍ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಇದರಿಮದ ಬಡಜನರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಸ್ಲಾಂಬಾಷಾ, ಬೆಸ್ಕಾಂ ಎಇಇ ಪೀರ್‍ಸಾಬ್, ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಸೇರಿದಂತೆ ಮುಖಂಡರಾದ ಈರಲಿಂಗೇಗೌಡ, ಹೆಚ್.ಮಹಂತೇಶ್, ಕೃಷ್ಣಮೂರ್ತಿ, ತಿಪ್ಪೇಸ್ವಾಮಿ, ಜಯಣ್ಣ, ಟಿ.ಎಲ್.ಬಸವರಾಜಪ್ಪ, ಸಿದ್ದೇಶ್ವರ್, ಷಡಾಕ್ಷರಿ, ಐಮಂಗಲ ಹೋಬಳಿಯ ವಿವಿಧ ಗ್ರಾಮ  ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಫಲಾನುಭವಿಗಳು ಇದ್ದರು. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ ಸ್ವಾಗತಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!