Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

---Advertisement---

ಚಿತ್ರದುರ್ಗ. ಫೆ.16: ಕರ್ನಾಟಕ ಸರ್ಕಾರವು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಅನುಷ್ಠಾನದಲ್ಲಿರುವ ಸುಗ್ರೀವಾಜ್ಞೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೆಚ್ಚು ಅಧಿಕಾರಗಳನ್ನು ನೀಡಿದ್ದು, ಸಾಲಗಾರರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಮುನ್ನೆಚ್ಚರಿಗೆ ವಹಿಸಬೇಕು. ಮತ್ತು ನಿಯಮಾನುಸಾರ ಸಾಲಕೊಡುವವರಿಗೂ ತೊಂದರೆಯಾಗದಂತೆ ಗಮನಹರಿಸಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.

 

ವಿಡಿಯೋ ಕಾನ್ಫರೆನ್ಸ್ ಮೂಲಕ  ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಹೊರಡಿಸಲಾಗಿರುವ ಸುಗ್ರೀವಾಜ್ಞೆಯ  ಅನುಷ್ಠಾನ ಕುರಿತು ಸಭೆ ಜರುಗಿಸಿ ಮಾತನಾಡಿದರು.

ಸುಗ್ರೀವಾಜ್ಞೆಯಿಂದ ನಿಯಮಾನುಸಾರ ಸಾಲ ನೀಡುವ ಲೇವಾದೇವಿಗಾರರಿಗೆ ಹಾಗೂ ಮನಿಲ್ಯಾಂಡರ್ ಅವರಿಗೆ ತೊಂದರೆ, ಕಿರುಕುಳ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬಡವರು, ಮಹಿಳೆಯರು ಮತ್ತು ರೈತರಿಗೆ ಸಾಲ ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್‍ದವರಿಂದ ಯಾವುದೇ ಕಿರುಕುಳ, ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳಿಗ್ಗೆ 9 ಗಂಟೆಗೆ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆಗೆ ಸಾಲ ವಸೂಲಾತಿಗಾಗಿ ಹೊಗಬಾರದು. ಬಲವಂತದ ವಸೂಲಾತಿಯನ್ನು ತಡೆಯಲು ಈ ಕಾನೂನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ 2022 ರಿಂದ 2025ರವರೆಗೆ ಇಂತಹ ಪ್ರಕರಣಗಳನ್ನು ಗಮನಿಸಿದಾಗ ಕಳದ 2 ತಿಂಗಳಲ್ಲಿ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್‍ಗಳಿಂದ ಸಾಲ ಪಡೆದವರಿಗೆ ಆಗುವ ಕಿರುಕುಳವನ್ನು ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸುಗ್ರೀವಾಜ್ಞೆಯನ್ನು ಅಧಿಕಾರಿಗಳು ಸರಿಯಾಗಿ ಅಧ್ಯಯನ ಮಾಡಿ, ಜಾರಿ ಮಾಡಬೇಕು. ಡಿಸಿ, ಎಸ್.ಪಿ ಅವರು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾಲ ವಸೂಲಾತಿಗಾಗಿ ಅನಗತ್ಯ ಕಿರುಕುಳ, ತೊಂದರೆ ಆಗುವಂತಹ ಪ್ರಕರಣಗಳನ್ನು ನಿಯಂತ್ರಿಸಿ, ಪ್ರಕರಣಗಳು ಶೂನ್ಯ ಆಗುವಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳು ನಿರ್ದೇಶಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ ಅವರು ವಿಡಿಯೋ ಸಂವಾದ ನಿರ್ವಹಿಸಿ, ಡಿಸಿ, ಎಸ್‍ಪಿಗಳಿಗೆ ನಿರ್ದೇಶನ ನೀಡಿ, ಮುಖ್ಯಮಂತ್ರಿಗಳು ನೀಡಿದ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಿ. ವೆಂಕಟೇಶ್ ಅವರು, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಮತ್ತು ಮೈಕ್ರೋ ಫೈನಾನ್ಸ್‍ದಾರರು, ಲೇವಾದೇವಿಗಾರರು, ಪಾನ್‍ಬ್ರೋಕರ್‍ಗಳ ಸಭೆ ಕರೆದು ಮತ್ತೊಮ್ಮೆ ತಿಳುವಳಿಕೆ ನೀಡಲಾಗುವುದು. ಸಾರ್ವಜನಿಕರಲ್ಲಿ ಸುಗ್ರೀವಾಜ್ಞೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment