ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಚಿತ್ರದುರ್ಗ. ಫೆ.16: ಕರ್ನಾಟಕ ಸರ್ಕಾರವು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಅನುಷ್ಠಾನದಲ್ಲಿರುವ ಸುಗ್ರೀವಾಜ್ಞೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೆಚ್ಚು ಅಧಿಕಾರಗಳನ್ನು ನೀಡಿದ್ದು, ಸಾಲಗಾರರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಮುನ್ನೆಚ್ಚರಿಗೆ ವಹಿಸಬೇಕು. ಮತ್ತು ನಿಯಮಾನುಸಾರ ಸಾಲಕೊಡುವವರಿಗೂ ತೊಂದರೆಯಾಗದಂತೆ ಗಮನಹರಿಸಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.

 

ವಿಡಿಯೋ ಕಾನ್ಫರೆನ್ಸ್ ಮೂಲಕ  ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಹೊರಡಿಸಲಾಗಿರುವ ಸುಗ್ರೀವಾಜ್ಞೆಯ  ಅನುಷ್ಠಾನ ಕುರಿತು ಸಭೆ ಜರುಗಿಸಿ ಮಾತನಾಡಿದರು.

ಸುಗ್ರೀವಾಜ್ಞೆಯಿಂದ ನಿಯಮಾನುಸಾರ ಸಾಲ ನೀಡುವ ಲೇವಾದೇವಿಗಾರರಿಗೆ ಹಾಗೂ ಮನಿಲ್ಯಾಂಡರ್ ಅವರಿಗೆ ತೊಂದರೆ, ಕಿರುಕುಳ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬಡವರು, ಮಹಿಳೆಯರು ಮತ್ತು ರೈತರಿಗೆ ಸಾಲ ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್‍ದವರಿಂದ ಯಾವುದೇ ಕಿರುಕುಳ, ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳಿಗ್ಗೆ 9 ಗಂಟೆಗೆ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆಗೆ ಸಾಲ ವಸೂಲಾತಿಗಾಗಿ ಹೊಗಬಾರದು. ಬಲವಂತದ ವಸೂಲಾತಿಯನ್ನು ತಡೆಯಲು ಈ ಕಾನೂನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ 2022 ರಿಂದ 2025ರವರೆಗೆ ಇಂತಹ ಪ್ರಕರಣಗಳನ್ನು ಗಮನಿಸಿದಾಗ ಕಳದ 2 ತಿಂಗಳಲ್ಲಿ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್‍ಗಳಿಂದ ಸಾಲ ಪಡೆದವರಿಗೆ ಆಗುವ ಕಿರುಕುಳವನ್ನು ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸುಗ್ರೀವಾಜ್ಞೆಯನ್ನು ಅಧಿಕಾರಿಗಳು ಸರಿಯಾಗಿ ಅಧ್ಯಯನ ಮಾಡಿ, ಜಾರಿ ಮಾಡಬೇಕು. ಡಿಸಿ, ಎಸ್.ಪಿ ಅವರು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾಲ ವಸೂಲಾತಿಗಾಗಿ ಅನಗತ್ಯ ಕಿರುಕುಳ, ತೊಂದರೆ ಆಗುವಂತಹ ಪ್ರಕರಣಗಳನ್ನು ನಿಯಂತ್ರಿಸಿ, ಪ್ರಕರಣಗಳು ಶೂನ್ಯ ಆಗುವಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳು ನಿರ್ದೇಶಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ ಅವರು ವಿಡಿಯೋ ಸಂವಾದ ನಿರ್ವಹಿಸಿ, ಡಿಸಿ, ಎಸ್‍ಪಿಗಳಿಗೆ ನಿರ್ದೇಶನ ನೀಡಿ, ಮುಖ್ಯಮಂತ್ರಿಗಳು ನೀಡಿದ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಿ. ವೆಂಕಟೇಶ್ ಅವರು, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಮತ್ತು ಮೈಕ್ರೋ ಫೈನಾನ್ಸ್‍ದಾರರು, ಲೇವಾದೇವಿಗಾರರು, ಪಾನ್‍ಬ್ರೋಕರ್‍ಗಳ ಸಭೆ ಕರೆದು ಮತ್ತೊಮ್ಮೆ ತಿಳುವಳಿಕೆ ನೀಡಲಾಗುವುದು. ಸಾರ್ವಜನಿಕರಲ್ಲಿ ಸುಗ್ರೀವಾಜ್ಞೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

suddionenews

Recent Posts

ಸಿಗರೇಟ್ ಸೇದಿದಾಗ ಆಗುವ ಅನುಭವದ ಹಿಂದಿನ ವೈಜ್ಞಾನಿಕ ಕಾರಣ ಇಲ್ಲಿದೆ…!

    ಸುದ್ದಿಒನ್ ಒತ್ತಡದ ಕೆಲಸಗಳು ಮತ್ತು ಕೆಟ್ಟ ಜೀವನಶೈಲಿಯಿಂದಾಗಿ ಇಂದಿನ ಯುವಕರ ಮಾನಸಿಕ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ. ಕಚೇರಿಗಳಲ್ಲಿ…

28 minutes ago

ಈ ರಾಶಿಯವರಿಗೆ ಕೊನೆ ಘಳಿಗೆಯಲ್ಲಿ ಪ್ರಮೋಷನ್ ಭಾಗ್ಯ

ಈ ರಾಶಿಯವರಿಗೆ ಕೊನೆ ಘಳಿಗೆಯಲ್ಲಿ ಪ್ರಮೋಷನ್ ಭಾಗ್ಯ, ಈ ರಾಶಿಯವರಿಗೆ ಆದಾಯ ಕುಂಠಿತ, ಸೋಮವಾರದ ರಾಶಿ ಭವಿಷ್ಯ 17 ಮಾರ್ಚ್…

2 hours ago

ಅದ್ದೂರಿಯಾಗಿ ನೆರವೇರಿದ ಅಂಬಿ‌ ಮೊಮ್ಮಗನ ನಾಮಕರಣ ; ತಾತನ ಹೆಸರು, ಗಣ್ಯರ ಹಾರೈಕೆ, ಯಾರೆಲ್ಲಾ ಬಂದಿದ್ರು..?

ಬೆಂಗಳೂರು; ರೆಬಲ್ ಸ್ಟಾರ್ ಅಂಬರೀಶ್ ಪುತ್ರನ ನಾಮಕರಣ ಇಂದು ಅದ್ದೂರಿಯಾಗಿ ನೆರವೇರಿದೆ. ಬೆಂಗಳೂರಿನ ಖಾಸಗಿ ಹೊಟೇಲ್ ನೆರವೇರಿದ್ದು, ಮೊಮ್ಮಗನಿಗೆ ತಾತನ…

11 hours ago

ನಮ್ಮದು ಸಾಮರಸ್ಯವನ್ನು ಎತ್ತಿಹಿಡಿಯುವ ಶಾಂತಿಪ್ರಿಯ ದೇಶ : ಲೆಕ್ಸ್ ಫ್ರೀಡ್ಮನ್ ಜೊತೆ ಪ್ರಧಾನಿ ಮೋದಿ ಪಾಡ್‌ಕ್ಯಾಸ್ಟ್

ಸುದ್ದಿಒನ್ : ಪ್ರಧಾನಿ ಮೋದಿ ಮತ್ತು AI ಸಂಶೋಧಕ ಲೆಕ್ಸ್ ಫ್ರೀಡ್ಮನ್ ನಡುವೆ ಆಸಕ್ತಿದಾಯಕ ಪಾಡ್‌ಕ್ಯಾಸ್ಟ್ ನಡೆಯಿತು. ಸ್ವಲ್ಪ ಸಮಯದ…

12 hours ago

ಕುಡಿಯುವ ನೀರಿಗಾಗಿ ಜಗಳ : ಮುರಿದು ಬಿದ್ದ ಮದುವೆ

ಸುದ್ದಿಒನ್, ಹಿರಿಯೂರು, ಮಾರ್ಚ್. 16  : ಆರತಕ್ಷತೆಯ ನಂತರ ಏರ್ಪಡಿಸಿದ್ದ ಭೋಜನದಲ್ಲಿ ಕೊನೆಗೆ ಬಂದ ಕೆಲವರಿಗೆ ಕುಡಿಯುವ ನೀರು ಸಿಗಲಿಲ್ಲ…

12 hours ago

ಸುನೀತಾ ವಿಲಿಯಮ್ಸ್ ಭೂಮಿಗೆ ಬಂದ ಮೇಲೆ ಎದುರಾಗಲಿವೆ ಈ ಆರೋಗ್ಯ ಸಮಸ್ಯೆ..!

    ಬೆಂಗಳೂರು; ಕಡೆಗೂ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಬರುವ ಸಮಯ ಹತ್ತಿರವಾಗಿದೆ. ಆದರೆ ಕಳೆದ…

12 hours ago