Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

---Advertisement---

ಬೆಂಗಳೂರು.ಸೆಪ್ಟೆಂಬರ್.11: ರಾಜ್ಯ ಸರ್ಕಾರದ 2026–27ನೇ ಸಾಲಿನ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಹಲವು ಸೌಲಭ್ಯ ಹಾಗೂ ಸಾಲ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ, ನೇರ ಸಾಲ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಆಸಕ್ತರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 03-09-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2026

ಅರ್ಜಿ ಆಹ್ವಾನಿಸಿರುವ ನಿಗಮಗಳ ವಿವರ:

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ)

ಸರ್ಕಾರದಿಂದ ನೀಡಲಾಗುವ ಈ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ಸೇವಾ ಸಿಂಧು ಅಧಿಕೃತ ವೆಬ್‌ಸೈಟ್ http://Sevasindhu.karnataka.gov.in ಗೆ ಭೇಟಿ ನೀಡಬಹುದು.

Join WhatsApp

Join Now

Join Telegram

Join Now