ಇರಾಕ್ ಇರಾನ್ ಅಮೇರಿಕಾ ನಡುವಿನ ಯುದ್ಧದ ಹಿನ್ನಲೆ ಕೆಲವು ಅಂತಾರಾಷ್ಟ್ರೀಯ ವಿಮಾನಗಳ (International flights) ವೇಳಾಪಟ್ಟಿಯಲ್ಲಿ ವ್ಯತ್ಯಯ ಉಂಟಾಗಿದೆ.ಹಾಗಾಗಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಮೊದಲು, ತಮ್ಮ ಸಂಬಂಧಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ವಿಮಾನದ ಇತ್ತೀಚಿನ ಸ್ಥಿತಿಗತಿಗಳನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಪ್ರಯಾಣಿಕರಿಗೆ ಅಗತ್ಯ ಸಹಾಯ ಮತ್ತು ಮಾರ್ಗದರ್ಶನ ಒದಗಿಸಲು ಟರ್ಮಿನಲ್ 2ರ ಕರ್ಬ್‌ಸೈಡ್ (ಹಂತ 3) ಹಾಗೂ ಟರ್ಮಿನಲ್ 1ರಲ್ಲಿ ಆಕಾಸಾ ಟಿಕೆಟಿಂಗ್ ಕೌಂಟರ್ ಪಕ್ಕದಲ್ಲಿ ಪ್ರತ್ಯೇಕ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.
ಪ್ರಯಾಣಿಕರ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಹಾಗೂ ಅನಾನುಕೂಲಗಳನ್ನು ಕಡಿಮೆ ಮಾಡಲು ವಿಮಾನಯಾನ ಸಂಸ್ಥೆಗಳು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ.
ಪ್ರಯಾಣಿಕರು ಸಹಕಾರ ನೀಡುವಂತೆ ವಿನಂತಿಸಲಾಗಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

https://x.com/blrairport_kn/status/2027758450873389321?s=20




