Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಂಪೇಗೌಡ ಏರ್ಪೋರ್ಟ್  ಪ್ರಯಾಣಿಕರಿಗೆ ಮಹತ್ವದ ಸೂಚನೆ!

---Advertisement---

ಇರಾಕ್ ಇರಾನ್ ಅಮೇರಿಕಾ ನಡುವಿನ‌ ಯುದ್ಧದ ಹಿನ್ನಲೆ ಕೆಲವು ಅಂತಾರಾಷ್ಟ್ರೀಯ ವಿಮಾನಗಳ (International flights) ವೇಳಾಪಟ್ಟಿಯಲ್ಲಿ ವ್ಯತ್ಯಯ ಉಂಟಾಗಿದೆ.ಹಾಗಾಗಿ ಪ್ರಯಾಣಿಕರು ಬೆಂಗಳೂರಿನ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಮೊದಲು, ತಮ್ಮ ಸಂಬಂಧಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ವಿಮಾನದ ಇತ್ತೀಚಿನ ಸ್ಥಿತಿಗತಿಗಳನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಪ್ರಯಾಣಿಕರಿಗೆ ಅಗತ್ಯ ಸಹಾಯ ಮತ್ತು ಮಾರ್ಗದರ್ಶನ ಒದಗಿಸಲು ಟರ್ಮಿನಲ್ 2ರ ಕರ್ಬ್‌ಸೈಡ್ (ಹಂತ 3) ಹಾಗೂ ಟರ್ಮಿನಲ್ 1ರಲ್ಲಿ ಆಕಾಸಾ ಟಿಕೆಟಿಂಗ್ ಕೌಂಟರ್ ಪಕ್ಕದಲ್ಲಿ ಪ್ರತ್ಯೇಕ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

ಪ್ರಯಾಣಿಕರ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಹಾಗೂ ಅನಾನುಕೂಲಗಳನ್ನು ಕಡಿಮೆ ಮಾಡಲು ವಿಮಾನಯಾನ ಸಂಸ್ಥೆಗಳು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ.
ಪ್ರಯಾಣಿಕರು ಸಹಕಾರ ನೀಡುವಂತೆ ವಿನಂತಿಸಲಾಗಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.

https://x.com/blrairport_kn/status/2027758450873389321?s=20

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now