Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ನಿವೇಶನ ಹೊಂದಿರುವವರಿಗೆ ಮಹತ್ವದ ಸೂಚನೆ : ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ

Facebook
Twitter
Telegram
WhatsApp

ಚಿತ್ರದುರ್ಗ. ಅ.04: ಚಿತ್ರದುರ್ಗ ನಗರಸಭೆಯ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನಗಳಿಗೆ ಫೆನ್ಸಿಂಗ್ ನಿರ್ಮಿಸಿಕೊಂಡು, ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಸೂಚನೆ ನೀಡಿದ್ದಾರೆ.

ನಗರ ವ್ಯಾಪ್ತಿಯಲ್ಲಿನ ಖಾಲಿ ನಿವೇಶನಗಳಲ್ಲಿ ಪಾರ್ಥೇನಿಯಂ, ಜಾಲಿ ಗಿಡ ಬೆಳೆದಿದ್ದು ಹಾಗೂ ಅಕ್ಕ-ಪಕ್ಕದ ಮನೆಗಳಿಂದ ಉತ್ವತ್ತಿಯಾಗುವ ತ್ಯಾಜ್ಯ(ಕಸ)ವನ್ನು ಖಾಲಿ ಇರುವ ನಿವೇಶನದಲ್ಲಿ ಸುರಿಯುತ್ತಿದ್ದು, ಅಲ್ಲಿ ಕಸ ಸಂಗ್ರಹವಾಗುತ್ತಿರುವುದು ಕಂಡುಬಂದಿದೆ, ಅಲ್ಲದೆ ಖಾಲಿ ಜಾಗಗಳು ಬಿಡಾಡಿ ದನಗಳು, ಹಂದಿಗಳು, ನಾಯಿಗಳು ಇತರೆ ವಿಷಜಂತುಗಳ ವಾಸಸ್ಥಾನವಾಗುತ್ತಿರುವುದು ಕಂಡುಬರುತ್ತಿದೆ.
ಖಾಲಿ ನಿವೇಶನಗಳಲ್ಲಿ ಮಳೆನೀರು ನಿಂತು ಸೊಳ್ಳೆಗಳು ಉತ್ವತ್ತಿಯಾಗಿ ಮಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯ ಸೇರಿದಂತೆ ಇನ್ನಿತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ, ಅಲ್ಲದೆ ಇದು ನಗರದ ಸೌಂದರ್ಯಕ್ಕೂ ಸಹ ಧಕ್ಕೆ ಉಂಟಾಗುತ್ತಿದೆ.

ಹೀಗಾಗಿ ಸಾರ್ವಜನಿಕರು ತಮ್ಮ ಖಾಲಿ ನಿವೇಶನಗಳಲ್ಲಿ ಇರುವಂತಹ ತ್ಯಾಜ್ಯವನ್ನು, ಗಿಡ ಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಕ್ಕೆ ಕಾಂಪೌಂಡ್, ಫೆನ್ಷಿಂಗ್ ನಿರ್ಮಿಸಿಕೊಳ್ಳಬೇಕು ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ರ ಅನ್ವಯ  ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆ ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!