ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಿಂದಾನೇ ಹುಬ್ಬಳ್ಳಿ – ಧಾರವಾಡ ಕೇಂದ್ರದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಬಸವ ಜಯಂತಿ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಜಗದೀಶ್ ಶೆಟ್ಟರ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಉತ್ತರ ಕರ್ನಾಟಕದ ಭಾಗದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿಗೆ ಆಶ್ವಾಸನೆ ನೀಡಿರುವ ಜಗದೀಶ್ ಶೆಟ್ಟರ್, ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ ಲಿಂಗಾಯತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಸಿಗಲಿವೆ. ಚುನಾವಣೆ ಎದುರಿಸಲು ನಾಗಪುರದಿಂದ ವಿಸ್ತಾರಕರು, ಪ್ರಚಾರಕರನ್ನು ಕರೆಸಿದ್ದಾರಂತೆ. ಹೊರಗಿನಿಂದ ಯಾರು ಯಾರು ಬರುತ್ತಾರೋ ಬರಲಿ. ಬಂದವರು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಚುನಾವಣೆಯೇ ಮುಗಿದು ಹೋಗಿರುತ್ತದೆ. ಹೊರಗಿನಿಂದ ಬಂದವರು ಏನು ಮಾಡಲು ಆಗುವುದಿಲ್ಲ ಎಂದಿದ್ದಾರೆ.
ಇನ್ನು ರಾಹುಲ್ ಗಾಂಧಿಯವರು ಹುಬ್ಬಳ್ಳಿ ಜೊತೆಗೆ ಉತ್ತರ ಕರ್ನಾಟಕದ ಬೇರೆ ಬೇರೆ ಕ್ಷೇತ್ರಗಳ ಗೆಲುವಿಗೆ ಸಹಕಾರ ಕೇಳಿದ್ದಾರೆ. ಹೀಗಾಗಿ ಶೆಟ್ಟರ್ ಕೂಡ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ತಾನೂ ಸೇರಿದ್ದು ಯಾಕೆ ಎಂಬುದನ್ನು ರಾಹುಲ್ ಗಾಂಧಿ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ.





GIPHY App Key not set. Please check settings