Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ದಿನದಂದು ಉಚಿತ ನೇತ್ರ ತಪಾಸಣಾ ಶಿಬಿರ

---Advertisement---

 

ಚಿತ್ರದುರ್ಗ. ಫೆ.19: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ (Cataract)  ಶಸ್ತ್ರಚಿಕಿತ್ಸೆ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ.

2024-25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕಣ್ಣಿನ ಸ್ವಾಸ್ಥ್ಯಕ್ಕಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವಿಶೇಷ ಅಭಿಯಾನ ಯೋಜನೆಯನ್ನು ಆರೋಗ್ಯ ಇಲಾಖೆ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ.

ಇದೇ ಫೆ.24ರಂದು ಹೊಳಲ್ಕೆರೆ ಪಟ್ಟಣದ ಸಂವಿಧಾನದ ಸೌಧ ಪಕ್ಕದ ಉರ್ದು ಶಾಲೆ ಹತ್ತಿರದ ಗುರುಭವನ,

ಫೆ.25ರಂದು ಹೊಸದುರ್ಗ ತಾಲ್ಲೂಕು ಆಸ್ಪತ್ರೆ,

ಫೆ.28ರಂದು ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಕ್ಷೇತ್ರ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ,

ಮಾರ್ಚ್ 01ರಂದು ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಎದುರಿನ ಸರ್ಕಾರಿ ನೌಕರರ ಸಂಘದ ಸಭಾಂಗಣ,

ಮಾರ್ಚ್ 03ರಂದು ಚಿತ್ರದುರ್ಗ ಬುದ್ಧನಗರದ ಒನಕೆ ಓಬವ್ವ ಸ್ಟೇಡಿಯಂ ಹತ್ತಿರದ ಜಿಲ್ಲಾ ಬಾಲಭವನ ಆವರಣದ ಜಿಲ್ಲಾ ಬಾಲಭವನ ಸಭಾಂಗಣ,

ಮಾರ್ಚ್ 05ರಂದು ಹಿರಿಯೂರು ನೆಹರು ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾ ಭವನದಲ್ಲಿ ಹಿರಿಯ ನಾಗಕರಿಗೆ ಉಚಿತ ನೇತ್ರ  ತಪಾಸಣಾ ಶಿಬಿರ ನಡೆಯಲಿದೆ. ಶಿಬಿರವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ನಡೆಯಲಿದೆ.

ತಪಾಸಣಾ  ಶಿಬಿರಕ್ಕೆ ಹಾಜರಾಗುವ ಹಿರಿಯ ನಾಗರಿಕರು ವಯಸ್ಸಿನ ಸಂಬಂಧ ಹಿರಿಯ ನಾಗರಿಕರ ಗುರುತಿನ ಚೀಟಿ, ಪಾನ್ ಕಾರ್ಡ್, ಆಧಾರ್ ಕಾರ್ಡ್. ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ-ಕಾಲೇಜು ದಾಖಲಾತಿ ಸೇರಿದಂತೆ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ ಪ್ರತಿ, ಆಧಾರ್  ಕಾರ್ಡ್, ಬಿಪಿಎಲ್ ಪಡಿತರ ಚೀಟಿಯೊಂದಿಗೆ ಹಾಜರಾಗಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...