ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಫಲಾನುಭವಿಗಳ ಮನೆಯ ಕದ ತಟ್ಟುವ ಕಾಲ ಸನ್ನಿಹಿತವಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.
ದಾವಣಗೆರೆ ರಸ್ತೆಯಲ್ಲಿರುವ ಜಗಳೂರು ಮಹಲಿಂಗಪ್ಪ ಕಂಫಟ್ರ್ಸ್‍ನಲ್ಲಿ ಗುರುವಾರ ನಡೆದ ಬಿಜೆಪಿ.ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ದಿಯೇ ಚುನಾವಣೆಯಲ್ಲಿ ಮೂಲಮಂತ್ರವಾಗಬೇಕು. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಪ್ರತಿಯೊಬ್ಬರ ಮನೆ, ಮನ ಮುಟ್ಟಿ ಬಿಜೆಪಿ.ಸರ್ಕಾರ ಏನೇನು ಕೊಡುಗೆಗಳನ್ನು ನೀಡಿದೆ ಎನ್ನುವುದನ್ನು ಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತ ಮಕ್ಕಳಿಗೆ ವಿದ್ಯಾಸಿರಿ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಬಿಜೆಪಿ.ಸಾಧನೆ ದೊಡ್ಡದು. ಯೋಜನೆಗಳನ್ನು ಪಡೆಯದಿರುವ ಫಲಾನುಭವಿಗಳೆ ಇಲ್ಲದ ಮನೆಗಳನ್ನು ಹುಡುಕಲು ಸಾಧ್ಯವಿಲ್ಲ. ಪಕ್ಷದ ಸಾಧನೆಗಳನ್ನು ಮತಗಳನ್ನಾಗಿ ಪರಿವರ್ತಿಸಬೇಕಾಗಿದೆ. ಇದೆ ತಿಂಗಳು ಚುನಾವಣೆ ನೀತಿ ಸಂಹಿತೆ ಜಾರಿಯಾಗಲಿರುವುದರಿಂದ ನಮ್ಮ ಕೆಲಸಕ್ಕೆ ಕೂಲಿ ಕೊಡಿ ಎಂದು ಮತದಾರರನ್ನು ಕೇಳುವ ಕಾಲ ಬಂದಿದೆ ಎಂದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಜಿಲ್ಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯೋಜನೆಗಳನ್ನು ಪಡೆದಿರುವ ಫಲಾನುಭವಿಗಳಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾರಿಗೂ ಅನ್ಯಾಯವಾಗಲು ಬಿಟ್ಟಿಲ್ಲ.
ಪ್ರಧಾನಿ ನರೇಂದ್ರಮೋದಿರವರು ಭಾರತವನ್ನು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ಹಿಂದೆಂದೂ ಆಗದ ಅಭಿವೃದ್ದಿ ಕೆಲಸಗಳು ಜಿಲ್ಲೆಯಲ್ಲಿ ಆಗಿದೆ. ಹಾಗಾಗಿ ಎಲ್ಲಾ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವಲ್ಲಿ ಪದಾಧಿಕಾರಿಗಳು ಶ್ರಮವಹಿಸಬೇಕೆಂದು ತಿಳಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಿಜೆಪಿ. ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್, ಸಂಪತ್, ನರೇಂದ್ರ ವೇದಿಕೆಯಲ್ಲಿದ್ದರು.