Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಒಳ ಚರಂಡಿಗಳಾಗಿವೆ ಅಂಡರ್ ಪಾಸ್ ಗಳು : ಸಾರ್ವಜನಿಕರ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.05  : ಮೆದೇಹಳ್ಳಿಗೆ ಹೋಗುವ ಅಂಡರ್ ಬ್ರಿಡ್ಜ್‌ನ ಬಳಿ ಕಳೆದ 45 ದಿನಗಳಿಂದಲೂ ಶೌಚಾಲಯದ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ.

ಡ್ರೈನೇಜ್ ನೀರು ತುಂಬಿ ಹರಿಯುತ್ತಿದ್ದು, ಇದರಲ್ಲಿಯೇ ಎಲ್ಲಾ ಬಗೆಯ ವಾಹನಗಳು ದಿನನಿತ್ಯವು ಸಂಚರಿಸುತ್ತಿವೆ. 45 ದಿನಗಳಲ್ಲಿ ಒಂದರೆಡು ಬಾರಿ ನಗರಸಭೆಯವರು ಬಂದು ಹೋಗಿದ್ದನ್ನು ಬಿಟ್ಟರೆ ಮತ್ತೆ ಇತ್ತ ತಲೆ ಹಾಕಿಲ್ಲ. ವಾಹನಗಳು ವೇಗವಾಗಿ ಚಲಿಸುವಾಗ ಶೌಚದ ನೀರು ಪಾದಚಾರಿಗಳ ಮೇಲೆ ಚಿಮ್ಮುತ್ತದೆ. ಸಾರ್ವಜನಿಕರು ನರಕ ಯಾತನೆ ಅನುಭವಿಸುವಂತಾಗಿದೆ. ಈಗಲಾದರೂ ನಗರಸಭೆಯವರು ಎಚ್ಚೆತ್ತುಕೊಂಡು ಇಲ್ಲಿನ ಡ್ರೈನೇಜ್ ಸ್ವಚ್ಚಗೊಳಿಸಿ ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ಮುಂದಾಗಲಿ ಎಂದು ಸಾಮಾಜಿಕ ಕಾರ್ಯಕರ್ತ ಎಂ.ಕೆ.ಪ್ರಹ್ಲಾದ್, ಅಂತರ್ಜಲ ತಜ್ಞ ಎನ್.ಜೆ.ದೇವರಾಜರೆಡ್ಡಿ ಇವರುಗಳು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment