ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.05 : ಮೆದೇಹಳ್ಳಿಗೆ ಹೋಗುವ ಅಂಡರ್ ಬ್ರಿಡ್ಜ್ನ ಬಳಿ ಕಳೆದ 45 ದಿನಗಳಿಂದಲೂ ಶೌಚಾಲಯದ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ.
ಡ್ರೈನೇಜ್ ನೀರು ತುಂಬಿ ಹರಿಯುತ್ತಿದ್ದು, ಇದರಲ್ಲಿಯೇ ಎಲ್ಲಾ ಬಗೆಯ ವಾಹನಗಳು ದಿನನಿತ್ಯವು ಸಂಚರಿಸುತ್ತಿವೆ. 45 ದಿನಗಳಲ್ಲಿ ಒಂದರೆಡು ಬಾರಿ ನಗರಸಭೆಯವರು ಬಂದು ಹೋಗಿದ್ದನ್ನು ಬಿಟ್ಟರೆ ಮತ್ತೆ ಇತ್ತ ತಲೆ ಹಾಕಿಲ್ಲ. ವಾಹನಗಳು ವೇಗವಾಗಿ ಚಲಿಸುವಾಗ ಶೌಚದ ನೀರು ಪಾದಚಾರಿಗಳ ಮೇಲೆ ಚಿಮ್ಮುತ್ತದೆ. ಸಾರ್ವಜನಿಕರು ನರಕ ಯಾತನೆ ಅನುಭವಿಸುವಂತಾಗಿದೆ. ಈಗಲಾದರೂ ನಗರಸಭೆಯವರು ಎಚ್ಚೆತ್ತುಕೊಂಡು ಇಲ್ಲಿನ ಡ್ರೈನೇಜ್ ಸ್ವಚ್ಚಗೊಳಿಸಿ ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ಮುಂದಾಗಲಿ ಎಂದು ಸಾಮಾಜಿಕ ಕಾರ್ಯಕರ್ತ ಎಂ.ಕೆ.ಪ್ರಹ್ಲಾದ್, ಅಂತರ್ಜಲ ತಜ್ಞ ಎನ್.ಜೆ.ದೇವರಾಜರೆಡ್ಡಿ ಇವರುಗಳು ಒತ್ತಾಯಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…