ಚಿತ್ರದುರ್ಗ ತಾಲ್ಲೂಕಿನಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ,(ಫೆ.10)  : ಚಿತ್ರದುರ್ಗ ತಾಲ್ಲೂಕಿನ ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಗ್ರಾಮದಲ್ಲಿ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ  ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಕೇಂದ್ರಸ್ಥಾನದಲ್ಲಿ ಮಾಡದಕರೆ (ಗೊಲ್ಲರಹಟ್ಟಿ) ಹಾಗೂ ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಗ್ರಾಮಗಳು ಸೇರಿ 05 ಎಎವೈ, 99 ಪಿ.ಹೆಚ್.ಹೆಚ್, 03 ಎನ್‍ಪಿ.ಹೆಚ್ ಪಡಿತರ ಚೀಟಿ ಸೇರಿದಂತೆ ಒಟ್ಟು 107 ಪಡಿತರ ಚೀಟಿಗಳಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ, ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ.

ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಯಾವುದೇ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಫಾರಂ “ಎ” ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ  ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

suddionenews

Recent Posts

ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ

ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…

41 minutes ago

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

10 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago