Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಜ. 15 ರಿಂದ 18 ರವರೆಗೆ ಡೆಸ್ಟಿನಿ-2025 ಸಾಂಸ್ಕೃತಿಕ ಉತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ನಗರದ ಪ್ರತಿಷ್ಠಿತ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಜ.15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ ಡೆಸ್ಟಿನಿ-2025 ಸಾಂಸ್ಕೃತಿಕ ಉತ್ಸವ ನಡೆಯಲಿದೆ.

ಜ.15 ರಂದು ಸಂಜೆ ಆರು ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಾಂಸ್ಕೃತಿಕ ಉತ್ಸವ ಉದ್ಗಾಟಿಸಲಿದ್ದು, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಪ್ರಖ್ಯಾತ ನಗೆ ವಾಗ್ಮಿ ಹಾಗೂ ನಟ ಪ್ರೊ.ಕೃಷ್ಣೆಗೌಡ, ಹಾಸ್ಯ ಚಟಾಕಿಯಿಂದಲೆ ಮನೆ ಮಾತಾಗಿರುವ ಸುಧಾ ಬರಗೂರು ಇವರುಗಳು ಪಾಲ್ಗೊಳ್ಳಲಿದ್ದಾರೆ.

ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ, ಅಧ್ಯಕ್ಷೆ ಎಂ.ಸಿ.ಯಶಸ್ವಿನಿ ಕಿರಣ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಇವರುಗಳು ಗೌರವ ಅತಿಥಿಗಳಾಗಿ ಡೆಸ್ಟಿನಿ-2025 ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಕಣ್ಮನ ಸೆಳೆಯುವ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿವೆ. ನಂತರ ವಾದ್ಯ ಸಂಗೀತ ಗೋಷ್ಠಿ ನಡೆಯಲಿದೆ.
ಜ.16 ರಂದು ಪ್ರಖ್ಯಾತ ಗಾಯಕ ವಿಜಯಪ್ರಕಾಶ್, ಗಾಯಕಿ ಅನುರಾಧಭಟ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಉಣಬಡಿಸಲಾಗುವುದು.

ಜನವರಿ 17 ರಂದು ಖ್ಯಾತ ರ‌್ಯಾಪ್ ಗಾಯಕ ರಾಹುಲ್ ಡಿಟ್ಟೋ ಕೆ.ಜಿ.ಎಫ್.ಖ್ಯಾತಿಯ ಗಾಯಕ ವೆಂಕಿರವರಿಂದ ಗಾನಸುಧೆ.

ಜನವರಿ 18 ರಂದು ಪ್ರಖ್ಯಾತ ಡಿ.ಜೆ. ಬ್ಯಾಂಡ್ ಎಚ್.ಟು.ಓ. ತಂಡದಿಂದ ಡಿ.ಜೆ.ಕಾರ್ಯಕ್ರಮದೊಂದಿಗೆ ಸಾಂಸ್ಕೃತಿಕ ಉತ್ಸವ ಸಂಪನ್ನಗೊಳ್ಳಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment