ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ ನ. 18 : ಇದೇ ನ. 27 ರಂದು ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರಿಂದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರ ಕುಂದುಕೊರತೆಗಳು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದ ಜನತಾದರ್ಶನ ಏರ್ಪಡಿಸಲಾಗುತ್ತಿದ್ದು, ಈ ಬಾರಿ ಜಿಲ್ಲಾ ಮಟ್ಟದ ಜನತಾದರ್ಶನ ನ. 27 ರಂದು ಬೆಳಿಗ್ಗೆ 10 ಗಂಟೆಗೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ವಾಸವಿ ಮಹಲ್‍ನಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು, ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ ಗಳ ವ್ಯವಸ್ಥೆ ಮಾಡಲಾಗುವುದು.
ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್