ಚಿತ್ರದುರ್ಗ,(ಮೇ 12) : 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಚಟುವಟಿಕೆಗಳು ಇದೇ ಮೇ 16 ರಿಂದ ಪ್ರಾರಂಭವಾಗಲಿದೆ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗಿದೆ.
2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 78 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಗೌರವಧನ ರೂ.8,000/- ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 499 ಹುದ್ದೆಗಳಿಗೆ ನಿಯಮಾನುಸಾರ ಅರ್ಜಿ ಆಹ್ವಾನಿಸಿ, ಅರ್ಹತೆ ಆಧಾರದ ಮೇಲೆ ಶಾಲಾ ಮುಖ್ಯಸ್ಥರ ಹಂತದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಗೌರವಧನ ರೂ.7500/- ರಂತೆ ತೆಗೆದುಕೊಳ್ಳಲು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಾರ್ಗಸೂಚಿ ನೀಡಿದ್ದು, ಅದರಂತೆ ಚಿತ್ರದುರ್ಗ ಜಿಲಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಹಂತದಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಖ್ಯಸ್ಥರಿಗೆ ಅಗತ್ಯ ಸೂಚನೆ ನೀಡಿ ಕ್ರಮವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.






GIPHY App Key not set. Please check settings