Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭಾಷೆ, ನೆಲದ ವಿಚಾರದಲ್ಲಿ ತಮಿಳರನ್ನು ನೋಡಿ ಕಲಿಯಬೇಕು : ಮುಖ್ಯಮಂತ್ರಿ ಚಂದ್ರು

---Advertisement---

 

ಬೆಂಗಳೂರು: ಕಾವೇರಿ ಅನ್ನುವುದು ಸುಮ್ಮನೆ ಅಲ್ಲ. ಇಡೀ ರಾಜ್ಯಕ್ಕೆ ಕೃಷಿಗೆ ಹಾಗೂ ಕುಡಿಯುವುದಕ್ಕೆ ನೀರಿನ ಅಗತ್ಯ ತುಂಬಾನೇ ಇದೆ. ಆದರೆ ಕಾವೇರಿ ಹೋರಾಟ ಎಂದು ಬಂದಾಗ ನೀವೂ ಬನ್ನಿ ನೀವೂ ಬನ್ನಿ ಅಂತ ಕರೆಯಬೇಕು. ಆದರೆ ನೆಲ, ಜಲ, ಭಾಷೆ ಎಂದಾಗ ತಮಿಳರನ್ನು ನೋಡಿ ಕಲಿಯುವುದು ತುಂಬಾ ಇದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

‘ನಾನು‌ ಮೂಲತಃ ರೈತ. ಆಮೇಲೆ ಕಲಾವಿದ. ನಾನೀಗ ಒಂದು ಪಕ್ಷದ ಅಧ್ಯಕ್ಷನಾಗಿದ್ದರು‌ ಮೊದಲಿನಿಂದಲೂ ನಾಡು, ನುಡಿ ವಿಚಾರಕ್ಕೆ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ಪಕ್ಷ ಬೇಧ ಮರೆತು ಒಗ್ಗಟ್ಟಾಗಿ ಹೋರಾಟ‌ ಮಾಡುವುದನ್ನು ತಮಿಳರನ್ನು ನೋಡಿ ಕಲಿಯಬೇಕಿದೆ. ಸುಪ್ರೀಂ ಕೋರ್ಟ್ ಕಾವೇರಿ ತೀರ್ಪು ನೀಡುವಾಗ, ಹೋರಾಟ ಮಾಡಿದರೆ ಇಲ್ಲಿನ ಸಮಸ್ಯೆ ಅವರಿಗೆ ಅರಿವಾಗುತ್ತದೆ.

ಕಾವೇರಿ ನೀರಿಗಾಗಿ ಮಾತ್ರವಲ್ಲ ರಾಜ್ಯದ ಯಾವುದೇ ಭಾಗದಲ್ಲಿ ನಾಡು, ನುಡಿ, ಗಡಿ, ರೈತರಿಗೆ ಸಮಸ್ಯೆಯಾದಾಗ ಹೋರಾಟ ಮಾಡುತ್ತೇವೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಮಾಧ್ಯಮಗಳು ಕೂಡ ಬಂದ್ ಯಶಸ್ವಿಯಾಗಲು ಕಾರಣ ಎಂದು ಧನ್ಯವಾದ ತಿಳಿಸಿದರು. ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು ಎಂದು ಅವರು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...