in ,

ವಿಧಾನಸಭೆ ಚುನಾವಣೆಯಲ್ಲಿ ಮಾದಿಗರು ಬಿಜೆಪಿ ಪರವಾಗಿದ್ದಾರೆ : ಮಂದಕೃಷ್ಣ ಮಾದಿಗ

suddione whatsapp group join

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.06) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ ಎಂದು ಕೇಂದ್ರ ಪಶು ಸಂಗೋಪನಾ ಮತ್ತು ಮೀನುಗಾರಿಕೆ ಸಚಿವ ಎಲ್.ಮುರುಗನ್ ಶ್ಲಾಘಿಸಿದರು.

ಬಿಜೆಪಿ.ಜಿಲ್ಲಾ ಚುನಾವಣಾ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಣ, ಅಂತ್ಯೋದಯದ ಮೂಲಕ ಎಲ್ಲರಿಗೂ ಸಮಾನತೆ ಒದಗಿಸಿದೆ. ಕ್ಯಾಬಿನೆಟ್ ಸಬ್ ಕಮಿಟಿ ರಚಿಸಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ದಿಟ್ಟ ನಿರ್ಧಾರ ಕೈಗೊಂಡಿದೆ. ಬಿಜೆಪಿ.ದಲಿತರಿಗೆ ಸಾಕಷ್ಟು ಸಹಾಯ ಮಾಡಿದೆ. ಕರ್ನಾಟಕದ ಎಲ್ಲಾ ಕಡೆ ಸುತ್ತಾಡಿದ್ದೇನೆ.

ಬಿಜೆಪಿ.ಗೆ ಉತ್ತಮ ವಾತಾವರಣವಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಿ.ಹೆಚ್.ತಿಪ್ಪಾರೆಡ್ಡಿ ಆರು ಬಾರಿ ಶಾಸಕರು ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕಾರಣಿ. ಬುಧವಾರ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಕ್ಷೇತ್ರದ ಮತದಾರರಲ್ಲಿ ವಿನಂತಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಮಾತನಾಡಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಾದಿಗರು ಬಿಜೆಪಿ ಪರವಾಗಿದ್ದಾರೆ. ಸದಾಶಿವ ಆಯೋಗ ಜಾರಿಗೊಳಿಸಿ ಒಳಮೀಸಲಾತಿಯನ್ನು ವರ್ಗಿಕರಿಸಿದೆ. ಬಿಜೆಪಿ.ಯಿಂದ ದಲಿತರಿಗೆ ಎಲ್ಲಿಯೂ ಅನ್ಯಾಯವಾಗಿಲ್ಲ. ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸುವಂತೆ ದಲಿತರಲ್ಲಿ ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ ಮಾತನಾಡುತ್ತ ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಸುತ್ತಾಡಿದ್ದೇನೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ವರ್ಗಿಕರಣ ರದ್ದುಪಡಿಸುವುದಾಗಿ ಕಾಂಗ್ರೆಸ್ ಹೇಳುತ್ತಿರವು ಕಾರಣಕ್ಕಾಗಿ ದಲಿತರು ಯಾವ ಪಕ್ಷದಲ್ಲಾದರು ಇರಿ ಬಿಜೆಪಿ.ಗೆ ಮತ ನೀಡಿ. ಬಂಜಾರ, ಭೋವಿಗಳಲ್ಲಿ ಕೆಲವರಿಗೆ ಬೇಸರವಾಗಿರಬಹುದು.

ನಾಲ್ಕುವರೆ ಪರ್ಸೆಂಟ್ ಕೊಟ್ಟಿದೆ. ಹಾಗಾಗಿ ನಮ್ಮ ಸಮಾಜದ ಬಂಧುಗಳು ಬಿಜೆಪಿ.ಗೆ ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ, ಜಗದೀಶ್‍ಬಾಯಿ ಮಕ್ವಾನ್, ನಗರಸಭೆ ಸದಸ್ಯೆ ತಾರಕೇಶ್ವರಿ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಚಂದ್ರಪ್ಪನ ಪರ ನಟ ಸುದೀಪ್ ಪ್ರಚಾರಕ್ಕೆ ಆಕ್ಷೇಪ

ಈ ರಾಶಿಯವರು ಮದುವೆ ಶುಭಯೋಗದಿಂದ ಆಸ್ತಿ ಖರೀದಿ ವಾಹನ ಖರೀದಿ