ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ.
ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ ಹೋಗಿದ್ದರು. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಾಗಿರಲಿಲ್ಲ. ಇಂದು ಸಂಜೆಯಿಂದ ಹಿರಿಯೂರು ತಾಲೂಕಿನಾದ್ಯಂತ ಮಳೆಯಾಗಿದ್ದು, ಜನರಿಗೆ ಕೊಂಚ ಸಮಾಧಾನ ತಂದಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಸುರಿದಿದೆ.
ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಅಡಿಕೆ, ತೆಂಗು, ಬಾಳೆ ಸೇರಿದಂತೆ ಇನ್ನೀತರ ತೋಟಗಾರಿಕೆ ಬೆಳೆಗಳು ಒಣಗಿ ಹೋಗಿವೆ. ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ ಹೋಗಿದ್ದರು. ಅಡಿಕೆ ಗಿಡಗಳಿಗೆ ಟ್ಯಾಂಕರ್ ನೀರು ಬಿಡಿಸುವ ಮೂಲಕ ತೋಟ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದಲ್ಲದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆ ಬಂದಿದ್ದು ರೈತರ ಮುಖದಲ್ಲಿ ಸಂತಸವನ್ನು ತಂದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











