ಸುದ್ದಿಒನ್, ಚಿತ್ರದುರ್ಗ, ಜನವರಿ.09 :
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದಂದು 7 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46766 ಕ್ಕೆ ಏರಿಕೆಯಾಗಿದೆ.
ಸೋಮವಾರ ಒಟ್ಟು 42 ಜನರ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 7 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ 25 ಸಕ್ರಿಯ ಪ್ರಕರಣಗಳು ಇವೆ.
ರಾಜ್ಯದ ವರದಿ :
ಆರೋಗ್ಯ ಇಲಾಖೆ ಪ್ರತಿದಿನ ಕೊರೊನಾ ಟೆಸ್ಟ್ ಮಾಡುತ್ತಲೆ ಇದೆ. ಪ್ರತಿದಿನದ ಟೆಸ್ಟ್ ನಲ್ಲಿ ಕೊರೊನಾ ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 279 ಹೊಸ ಕೊರೊನಾ ಕೇಸ್ ದಾಖಲಾಗಿದೆ. ಈ ಮೂಲಕ 1222 ಕೊರೊನಾ ಕೇಸ್ ಸಕ್ರಿಯವಾಗಿವೆ.
ಕಳೆದ 24 ಗಂಟೆಯಲ್ಲಿ 6359 ಟೆಸ್ಟ್ ಗಳನ್ನು ಮಾಡಲಾಗಿದ್ದು, ಅದರಲ್ಲಿ 5512 RTPCR, 847 RAT ಟೆಸ್ಟ್ ಮಾಡಲಾಗಿದೆ. ಅದರಲ್ಲಿ 279 ಪಾಸಿಟಿವ್ ಕೇಸ್ ಗಳು ದಾಖಲಾಗಿದೆ. ಪಾಸಿಟಿವ್ ಕೇಸ್ 4.38% ಏರಿಕೆಯಾಗಿದೆ.
ಉಳಿದಂತೆ 3 ಸಾವಾಗಿದ್ದು, 1144 ಜನ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ಜನ ಐಸಿಯು ನಲ್ಲಿದ್ದರೆ, 235 ಜನ ಡಿಸ್ಚಾರ್ಜ್ ಆಗಿದ್ದಾರೆ.
ಇದರಲ್ಲಿ ಬೆಂಗಳೂರು ನಗರ 134, ಹಾಸನ-13, ಮೈಸೂರು -23 ಕೇಸ್ ಗಳಯ ಕಾಣಿಸಿಕೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ಹತ್ತಕ್ಕೂ ಕಡಿಮೆ ಕೇಸ್, ಇನ್ನು ಕೆಲ ಜಿಲ್ಲೆಗಳಲ್ಲಿ ಜೀರೋ ಕೇಸ್ ಗಳು ಕಂಡು ಬಂದಿವೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.








