ಸುದ್ದಿಒನ್, ಚಿತ್ರದುರ್ಗ ನ.20 : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಹಿರೆಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್‍ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್, ಕೋಟೆ, ಹೊಳಲ್ಕೆರೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ, ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನವೆಂಬರ್ 22ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್‍ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಹೊಳಲ್ಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















