Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಕ್ಕಿಲ್ಲ ಅಡ್ಡಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡ ಈ ಯೋಜನೆಯಲ್ಲಿ, 2020-21 ನೇ ಸಾಲಿನಲ್ಲಿ ಕರ್ನಾಟಕ ಉತ್ತಮ ರಾಜ್ಯ ಎಂದೆನಿಸಿಕೊಂಡಿದೆ. ಉಪಕೇಂದ್ರಗಳ ವಿಭಾಗದಲ್ಲಿ 2,263 ಎಚ್‍ಡಬ್ಲ್ಯುಸಿ ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಮಾರ್ಚ್ 31 ರವರೆಗೆ, 3,300 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದರೆ, ನಿಗದಿತ ಗುರಿಗಿಂತ 146% ರಷ್ಟು ಸಾಧನೆಯಾಗಿದೆ. 2,096 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 2,168 ಪೂರ್ಣವಾಗಿದೆ. ಅಂದರೆ ನಿಗದಿತ ಗುರಿಗಿಂತ 103% ರಷ್ಟು ಸಾಧನೆಯಾಗಿದೆ. 294 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 364 ಕೇಂದ್ರ ರೂಪಿಸಲಾಗಿದೆ. ಅಂದರೆ, ನಿಗದಿತ ಗುರಿಗಿಂತ 124% ರಷ್ಟು ಸಾಧನೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ 4,653 ಎಚ್‍ಡಬ್ಲ್ಯುಸಿ ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಗುರಿಯನ್ನು ಮೀರಿ 5,832 ಕೇಂದ್ರಗಳನ್ನು ಆರಂಭಿಸಲಾಗಿದೆ. ಅಂದರೆ, ಒಟ್ಟಾರೆಯಾಗಿ 125% ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಜನಸಮುದಾಯಕ್ಕೆ ಸ್ಥಳೀಯ ಮಟ್ಟದಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಲ್ಲ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ನೀಡುತ್ತಿರುವ 11,595 ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸುವ ಗುರಿ ಇದೆ.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರಂಭವಾಗಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಸಾರ್ವಜನಿಕರಿಗೆ ಯೋಗ ಶಿಕ್ಷಣ ಶಿಬಿರಗಳು, ಅರ್ಹ ದಂಪತಿಗೆ ತಾತ್ಕಾಲಿಕ ಹಾಗೂ ಶಾಶ್ವತ ಗರ್ಭ ನಿರೋಧಕ ವಿಧಾನಗಳ ಸೇವೆ, ಕಣ್ಣು, ಮೂಗು, ಗಂಟಲು ಮತ್ತು ಬಾಯಿ ಸಂಬಂಧಿ ರೋಗಗಳಿಗೆ ತಪಾಸಣೆ, ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯವಿದ್ದರೆ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ಕಳುಹಿಸಿಕೊಡುವ ಸೌಲಭ್ಯಗಳಿವೆ.

ಈ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿರುವ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಇಡೀ ದೇಶದಲ್ಲಿಯೇ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ಜನರು ದೂರದ ನಗರ ಪ್ರದೇಶಗಳಿಗೆ ಸಂಚರಿಸಿ ಆರೋಗ್ಯ ಸೇವೆ ಪಡೆಯುವ ಹೊರೆಯನ್ನು ತಪ್ಪಿಸಿ, ಸುಲಭವಾಗಿ ತಮ್ಮ ಮನೆಯ ಸಮೀಪದಲ್ಲೇ ಆರೋಗ್ಯ ಸೇವೆ ಪಡೆಯಬೇಕೆನ್ನುವುದು ನಮ್ಮ ಸರ್ಕಾರದ ಗುರಿ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಈ ನಿಟ್ಟಿನಲ್ಲಿ ಬಹಳ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಾಧನೆಗಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗ ಆರೋಗ್ಯ ಕ್ಷೇತ್ರ ಕೋವಿಡ್ ನಿವಾರಿಸುವ ಕಡೆ ಹೆಚ್ಚು ಗಮನನೀಡಿದೆ. ಕೋವಿಡ್ ನಿಂದ ಆರ್ಥಿಕ ಸಂಕಷ್ಟವೂ ಉಂಟಾಗಿದೆ. ಇಷ್ಟಿದ್ದರೂ ರಾಜ್ಯದಲ್ಲಿ ಇತರೆ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಯಾವುದೇ ಹಿನ್ನೆಡೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!