ರಾಜ್ಯಾದ್ಯಂತ ಮಾನ್ಸೂನ್ ಮಳೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಸಂಪರ್ಕವನ್ನೇ ಕಳೆದುಕೊಂಡಿವೆ. ಜನ ಓಡಾಡುವುದಕ್ಕೂ ಭಯಭೀತರಾಗಿದ್ದಾರೆ.
ಕಾಲುವೆಗಳು ತುಂಬಿ ಹರಿಯುತ್ತಿವೆ. ಕೆಲವೊಂದು ಜಲಾಶಯಗಳು ತುಂಬಿರುವ ಕಾರಣ, ಸುತ್ತಮುತ್ತ ಇರುವ ಗ್ರಾಮದ ಜನ ಆತಂಕದಿಂದ ವಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ಇದು ಶೈಕ್ಷಣಿಕ ಆರಂಭಿಕ ವರ್ಷ ಬೇರೆ. ಮಳೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಕೂಡ ಕಷ್ಟ ಸಾಧ್ಯವಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಹಾಸನ, ಧಾರವಾಡ, ದಾವಣಗೆರೆ, ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗುವ ತನಕ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆ ಕಡಿಮೆಯಾಗದ ಹಿನ್ನಲೆ ಇಂದು ರಜೆ ಘೋಷಣೆ ಮಾಡಲಾಗಿದೆ.