Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜುಲೈ 29 ರಂದು ಜಾಗತಿಕ ಲಿಂಗಾಯಿತ ಮಹಾಸಭಾದ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಜಾಗತಿಕ ಲಿಂಗಾಯಿತ ಮಹಾಸಭಾ ಬೆಂಗಳೂರು, ಜಿಲ್ಲಾ ಘಟಕದ ಉದ್ಗಾಟನಾ ಹಾಗೂ ಪದಗ್ರಹಣ ಸಮಾರಂಭ ಜುಲೈ 29 ರಂದು ಬೆಳಿಗ್ಗೆ 10: 30 ಕ್ಕೆ
ತ.ರಾ.ಸು.ರಂಗಮಂದಿರಲ್ಲಿ ನಡೆಯಲಿದೆ ಎಂದು ಪ್ರಧಾನ ಸಂಚಾಲಕ ಜಿ.ಡಿ.ಕೆಂಚವೀರಪ್ಪ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ, ಮುರುಘಾಮಠದ ಜಯಬಸವಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಐ.ಎ.ಎಸ್.ಅಧಿಕಾರಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಜಾಮದಾರ್ ಉದ್ಘಾಟಿಸುವರು.

ಬಸವಮಂಟಪದ ಮಾತೆ ದಾನೇಶ್ವರಿ ತಾಯಿ, ಮಹಾಸಭಾ ಬೆಳಗಾಂ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಶ್ರೀಮತಿ ಪುಷ್ಪಲತಾ ಎಸ್.ವಿ. ಹನುಮೇಶ ಕಲಮಂಗಿ ಮಹಾದೇವಪ್ಪ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಿವೃತ್ತ ಪ್ರಾಧ್ಯಾಪಕ ಹಾಗೂ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿ.ಡಿ.ಕೆಂಚವೀರಪ್ಪ ಮನವಿ ಮಾಡಿದರು. ಜಿ.ಟಿ.ನಂದೀಶ್, ಧನಂಜಯ, ಎಲ್.ಬಸವರಾಜಪ್ಪ ಅಳಗವಾಡಿ, ಸಿದ್ದಪ್ಪ ಹಳಿಯೂರು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...