ಚಿತ್ರದುರ್ಗ. ನ.28: ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಉದ್ಘಾಟನಾ ಸಮಾರಂಭ ಇದೇ ನವೆಂಬರ್ 29ರಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ವಿಭಾಗದ ಪ್ರಭಾರಿ ನಿರ್ದೇಶಕ ಡಾ.ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಜೆ.ಸಾಧಿಕ್ ಭಾಗವಹಿಸುವರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಬಿ.ಹೆಚ್.ಕುಮಾರಸ್ವಾಮಿ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ.ಡಿ.ಓ.ಸಿದ್ದಪ್ಪ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಪಿ.ಎನ್.ಮಧುಸೂದನ ಉಪಸ್ಥಿತಿವಹಿಸುವರು.
ಸಂಜೆ 4ಕ್ಕೆ ಸಮಾರೋಪ ಸಮಾರಂಭ: ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಸಮಾರೋಪ ಸಮಾರಂಭ ನ.29ರಂದು ಸಂಜೆ 4ಕ್ಕೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಬಹುಮಾನ ವಿತರಣೆ ಮಾಡುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಹ್ಯಾಂಡ್‍ಬಾಲ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಹ್ಯಾಂಡ್‍ಬಾಲ್ ಅಸೋಶಿಯೇಷನ್ ಅಧ್ಯಕ್ಷ ಕೆ.ಹೆಚ್.ಶಿವರಾಂ, ದಾವಣಗೆರೆ ವಿವಿ ಕ್ರೀಡಾ ಅಧಿಕಾರಿ ಡಾ.ಬಿ.ಹೆಚ್.ವೀರಪ್ಪ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ ಭಾಗವಹಿಸುವರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಮಂಜುನಾಥ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿ.ಚನ್ನಕೇಶವ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















