ಚಿತ್ರದುರ್ಗ,(ಏ.16) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಹೊಳಲ್ಕೆರೆ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಏಪ್ರಿಲ್ 18 ರಂದು ಬೆಳಿಗ್ಗೆ 9 ಗಂಟೆಗೆ ಹೊಳಲ್ಕೆರೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಘನ ಉಪಸ್ಥಿತಿ ವಹಿಸುವರು. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಬಸ್ ನಿಲ್ದಾಣ ಉದ್ಘಾಟನೆ ಮಾಡುವರು. ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ನೂತನ ಬಸ್ ಮಾರ್ಗಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಿದ್ದಾರೆ. ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕರು ಹಾಗೂ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಕ.ರಾ.ರ.ಸಾ.ನಿಗಮದ ಉಪಾಧ್ಯಕ್ಷ ಎಸ್.ಎನ್.ಈಶ್ವರಪ್ಪ, ಹೊಳಲ್ಕೆರೆ ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್, ಹೊಳಲ್ಕೆರೆ ಪುರಸಭೆ ಉಪಾಧ್ಯಕ್ಷ ಕೆ.ಸಿ.ರಮೇಶ್, ಹೊಳಲ್ಕೆರೆ ಪುರಸಭೆ ಸದಸ್ಯ ಸಯ್ಯದ್ ಮನ್ಸೂರ್, ಶಿವಮೊಗ್ಗ ಮಂಡಳಿಯ ನಿರ್ದೇಶಕ ಪಿ.ರುದ್ರೇಶ್, ಹುಬ್ಬಳ್ಳಿ ಮಂಡಳಿಯ ನಿರ್ದೇಶಕ ರಾಜು ವಿಠಲಸ ಜರತಾರಘರ, ಹರಪ್ಪನಹಳ್ಳಿ ಮಂಡಳಿಯ ನಿರ್ದೇಶಕ ಆರುಂಡಿ ನಾಗರಾಜ್ ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.