Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಪೊಲೀಸ್ ವಸತಿ ಸಮುಚ್ಚಯ ಮತ್ತು ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ. ನ.16:  ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನ.17 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಹೊಸಪೇಟೆ ರಸ್ತೆ, ಬಸವೇಶ್ವರ ನಗರದಲ್ಲಿ ಪೊಲೀಸ್ ವಸತಿ ಸಮುಚ್ಚಯದ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ.

ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ನೂತನ ಕಟ್ಟಡ ಉದ್ಘಾಟನೆ ನೇರವೇರಿಸುವರು.  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಯೋಜನಾ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಘನ ಉಪಸ್ಥಿತಿ ವಹಿಸುವವರು.

ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವವರು. ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಡಿ.ಜಿ.ಪಿ ಅಲೋಕ್ ಮೋಹನ್, ಬೆಂಗಳೂರು ಕೆ.ಎಸ್.ಪಿ.ಹೆಚ್ ಮತ್ತು ಐ.ಡಿ.ಸಿ.ಎಲ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಚಂದ್ರರಾವ್, ಕಾನೂನು ಮತ್ತು ಸುವ್ಯವಸ್ಥೆಯ ಎ.ಡಿ.ಜಿ.ಪಿ. ಆರ್. ಹಿತೇಂದ್ರ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ದಾವಣಗೆರೆ ಪೂರ್ವ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಬೆಂಗಳೂರು ಕೆ.ಎಸ್.ಪಿ.ಹೆಚ್ ಮತ್ತು ಐ.ಡಿ.ಸಿ.ಎಲ್ ಅಭಿಯಂತರ ಬಿ.ಹೆಚ್. ಮಂಜುನಾಥ ಮುಂತಾದವರು ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!