Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಂಗಭದ್ರಾ ಜಲಾಶಯದ ನೂತನ ಗೇಟ್ ಗಳ ಲೋಕಾರ್ಪಣೆ, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಡಿ.ಕೆ. ಶಿವಕುಮಾರ್

---Advertisement---

ಕೊಪ್ಪಳ.ಜೂನ್.25: ರೈತರ ಹಿತರಕ್ಷಣೆಯೇ ನಮ್ಮ ಸರ್ಕಾರದ ಪರಮೋಚ್ಚ ಧ್ಯೇಯವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ತುಂಗಭದ್ರಾ ಅಣೆಕಟ್ಟಿನಲ್ಲಿ ಎದುರಾಗಿದ್ದ ಗೇಟ್ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ, ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿ ಯಾವುದೇ ವಿಳಂಬವಿಲ್ಲದೆ ನೂತನ ಗೇಟ್ ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿದ್ದು, ಇಂದು ಅದನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಹೊಸಪೇಟೆಯ ಟಿ.ಬಿ. ಡ್ಯಾಂನ ಗೇಟ್ ಸಂಖ್ಯೆ 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ಈ ಐತಿಹಾಸಿಕ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕೇಂದ್ರ ಜಲಶಕ್ತಿ ಸಚಿವರಾದ ಸಿ. ಆರ್. ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಘನ ಉಪಸ್ಥಿತಿಯಲ್ಲಿ ನೂತನವಾಗಿ ಅಳವಡಿಸಲಾದ 33 ಸ್ಪಿಲ್ವೇ ಗೇಟ್ಗಳನ್ನು ಜನತೆಗೆ ಸಮರ್ಪಿಸಲಾಯಿತು.

ಈ ಮಹತ್ವದ ಸಂದರ್ಭದಲ್ಲಿ ಸಚಿವರುಗಳಾದ ಹೆಚ್. ಕೆ. ಪಾಟೀಲ್, ಎನ್. ಎಸ್. ಬೋಸರಾಜು, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಶಾಸಕರು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Join WhatsApp

Join Now

Join Telegram

Join Now