Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 18 ರಂದು ಮುಖ್ಯಮಂತ್ರಿಗಳಿಂದ ಒನಕೆ ಓಬವ್ವ ಜಯಂತಿ ಉದ್ಘಾಟನೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಡಿ.16) :  ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಡಿ. 18 ರಂದು ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಇದಕ್ಕಾಗಿ ಮೈದಾನದಲ್ಲಿ ಪೆಂಡಾಲ್, ವೇದಿಕೆ ನಿರ್ಮಾಣ ಸೇರಿದಂತೆ ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ನೆಹರು ಚ. ಓಲೇಕಾರ್ ಸೇರಿದಂತೆ ವಿವಿಧ ಗಣ್ಯರು ಮೈದಾನದಲ್ಲಿ ಸಮಾರಂಭದ ಸಿದ್ಧತೆಗಳನ್ನು ಶುಕ್ರವಾರ ಪರಿಶೀಲಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಡಿ. 18 ರಂದು ಮಧ್ಯಾಹ್ನ 01 ಗಂಟೆಗೆ ನಡೆಯಲಿದೆ.  ಕಾರ್ಯಕ್ರಮದ ಅಂಗವಾಗಿ ಅಂದು ಬೆ. 09 ಗಂಟೆಗೆ ಕನಕವೃತ್ತದಿಂದ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ರಾಜ್ಯ ವಿವಿಧ ಜಾನಪದ ಕಲಾತಂಡಗಳಿಂದ ಭವ್ಯ ಮೆರವಣಿಗೆ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಛಲವಾದಿ ಮಹಾಸಂಸ್ಥಾನ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ, ಸಿದ್ದಯ್ಯನಕೋಟೆ ವಿಜಯಮಹಾಂತೇಶ್ವರ ಶಾಖಾಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಚನ್ನೇನಹಳ್ಳಿ ಛಲವಾದಿ ಗುರುಪೀಠದ ಶ್ರೀ ಬಸವಲಿಂಗಮೂರ್ತಿ ಶರಣರು ದಿವ್ಯಸಾನಿಧ್ಯ ವಹಿಸುವರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದ ಎ. ನಾರಾಯಣಸ್ವಾಮಿ, ಸಾರಿಗೆ ಮತ್ತು ಪ.ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಉನ್ನತ ಶಿಕ್ಷಣ, ಐಟಿಬಿಟಿ, ವಿಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎಸ್., ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿಯಲ್ಲಿ ಸಮಾರಂಭ ಜರುಗಲಿದೆ.  ಸಾಂಸ್ಕøತಿಕ ನಾಯಕಿ ಒನಕೆ ಓಬವ್ವ ಹಾಗೂ ವೀರ ವನಿತೆ ಒನಕೆ ಓಬವ್ವ ಪುಸ್ತಕಗಳ ಬಿಡುಗಡೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಾಡುವರು.

ಸಮಾರಂಭದ ಅಧ್ಯಕ್ಷತೆಯನ್ನು ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ವಹಿಸುವರು.  ಗೌರವ ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ ಡಾ. ವೈ.ಎ. ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಡಿ. ಶೇಖರ್, ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ನೆಹರು ಚ. ಓಲೇಕಾರ್, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ. ಮಾಡಾಳ್ ವಿರೂಪಾಕ್ಷಪ್ಪ, ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ನಾಗೇಶ್, ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್. ವೀರಯ್ಯ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್, ದಕ್ಷಿಣಕನ್ನಡ ಸಂಸದ ನಳೀನ್ ಕುಮಾರ್ ಕಟೀಲು, ಕೋಲಾರ ಸಂಸದ ಮುನಿಸ್ವಾಮಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ. ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಚಿದಾನಂದಗೌಡ ಹಾಗೂ ಕೆ.ಎಸ್. ನವೀನ್ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ಕೊಳ್ಳೆಗಾಲ ಶಾಸಕ ಎನ್. ಮಹೇಶ್, ಹು-ಧಾರವಾಡ ಪೂರ್ವ ಶಾಸಕ ಪ್ರಸಾದ್ ಅಬ್ಬಯ್ಯ, ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ, ಆನೇಕಲ್ ಶಾಸಕ ಬಿ. ಶಿವಣ್ಣ, ನಂಜನಗೂಡು ಶಾಸಕ ಹರ್ಷವರ್ಧನ್, ಟಿ. ನರಸೀಪುರ ಶಾಸಕ ಆರ್. ಅಶ್ವಿನ್ ಕುಮಾರ್, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮಳವಳ್ಳಿ ಶಾಸಕ ಡಾ. ಕೆ. ಅನ್ನದಾನಿ, ನೆಲಮಂಗಲ ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ, ವಿಧಾನಪರಿಷತ್ ಸದಸ್ಯರುಗಳಾದ ಛಲವಾದಿ ನಾರಾಯಣಸ್ವಾಮಿ, ತುಳಸಿ ಮುನಿರಾಜು ಗೌಡ, ಎನ್. ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ ವೆಂಕಟೇಶ್, ಮಾಜಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ, ಮಾಜಿ ಸಂಸದ ಆರ್. ಧ್ರುವ ನಾರಾಯಣ್, ಮಾಜಿ ಸಚಿವರುಗಳಾದ ಬಿ.ಬಿ. ನಿಂಗಯ್ಯ, ನರೇಂದ್ರಸ್ವಾಮಿ, ಮೋಟಮ್ಮ, ರಾಜ್ಯಸಭಾ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಪಾಲ್ಗೊಳ್ಳುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಂಟಿ ನಿರ್ದೇಶಕ ಅಶೋಕ ಎನ್. ಛಲವಾದಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ನಗರಸಭೆ ಆಯುಕ್ತ ಎನ್. ಸತೀಶ್ ರೆಡ್ಡಿ ಅವರು ಸಮಾರಂಭದಲ್ಲಿ ಭಾಗವಹಿಸುವರು.  ಸಮಾರಂಭದಲ್ಲಿ ಒನಕೆ ಓಬವ್ವ ವಂಶಸ್ಥರಿಗೆ ಮತ್ತು ವಿಶೇಷ ಸಾಧನೆ ಮಾಡಿದ ಸಮುದಾಯದ ಗಣ್ಯರಿಗೆ ಸನ್ಮಾನ ಜರುಗಲಿದೆ.  ಹಂಪಿ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಚೆಲುವರಾಜು ವಿಶೇಷ ಉಪನ್ಯಾಸ ನೀಡುವರು.  ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ‘ಸಾಂಸ್ಕøತಿಕ ನಾಯಕಿ ಓಬವ್ವ’ ಕೃತಿ ಇದೇ ಸಂದರ್ಭದಲ್ಲಿ ಬಿಡುಗಡೆಗೊಳ್ಳಲಿದೆ.  ಛಲವಾದಿ ಸಮುದಾಯದ ಎಲ್ಲಾ ಸಂಘಸಂಸ್ಥೆಗಳ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಎಲ್ಲ ಸಮಾಜದ ಬಾಂಧವರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!