Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.08 :  ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ವತಿಯಿಂದ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನಾ ಸಮಾರಂಭವನ್ನು ಇದೇ ಫೆ.11ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ರಂಗಯ್ಯನಬಾಗಿಲು ಸಮೀಪದ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಾವೇರಿಯ ನರಸೀಪುರ ಸುಕ್ಷೇತ್ರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ದಿವ್ಯಸಾನಿಧ್ಯವಹಿಸುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಘನಉಪಸ್ಥಿತಿ ವಹಿಸುವರು.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಮಾರಂಭ ಉದ್ಘಾಟನೆ ನೆರವೇರಿಸುವರು. ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಸಮುದಾಯ ಭವನ ಉದ್ಘಾಟನೆ ನೆರವೇರಿಸುವರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು. ಮಾಜಿ ಸಚಿವ ಹೆಚ್.ಆಂಜನೇಯ ನಾಮಫಲಕದ ಉದ್ಘಾಟನೆ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಶ್ರೀ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ರಾಜ್ಯಾಧ್ಯಕ್ಷ ಬಿ.ಮೌಲಾಲಿ ಅವರು ಶ್ರೀ ಗಂಗಾಪರಮೇಶ್ವರಿ ಅಮ್ಮನವರ ನೂತನ ವಿಗ್ರಹದ ಪುಷ್ಪಾರ್ಚನೆ  ನೆರವೇರಿಸುವರು.

ಗೌರವಾನ್ವಿತ ಆಹ್ವಾನಿತರಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಚಿತ್ರದುರ್ಗ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಹೆಚ್.ಡಿ.ರಂಗಯ್ಯ ಅಧ್ಯಕ್ಷತೆ ವಹಿಸುವರು.

ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ತಿಪ್ಪಣ್ಣ ಕಮ್ಮಕನೂರು, ಸಾಯಿಬಣ್ಣ ತಳವಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಿರಿಗೆರೆ ತರಳಬಾಳು ಬೃಹನ್ಮಠದ ಪ್ರಧಾನ ಕಾರ್ಯದರ್ಶಿ ಎಸ್.ಬಿ.ರಂಗನಾಥ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್.ಎನ್.ಗಂಗಾಧರಯ್ಯ, ರಾಜ್ಯ ಗಂಗಾಮತಸ್ಥ ನೌಕರರ ಸಂಘ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಬಿ.ಸುಣಗಾರ್, ರಾಜ್ಯ ಗಂಗಾಮತಸ್ಥ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ, ರಾಮನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ಕೌಶಲ್ಯ ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ನಾಗೇಂದ್ರ ಎಫ್.ಹೊನ್ನಳ್ಳಿ, ವಿಧಾನ ಸೌಧ ಹಿರಿಯ ಆಪ್ತ ಕಾರ್ಯದರ್ಶಿ ಶ್ರೀಧರ್ ಮೂರ್ತಿ ಪಂಡಿತ್, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ನಾಗರಾಜ್, ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಆರ್.ಅವಿನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಪಾಲಕ ಅಭಿಯಂತರ ಎಸ್.ರೂಪಶ್ರೀ ಟಿ.ಪವನ್ ಕುಮಾರ್, ಚಿತ್ರದುರ್ಗ ಬೆಸ್ಕಾಂ ಎಂ.ಟಿ.ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಕೆ.ಶಿವಕುಮಾರ್, ಶಿವಮೊಗ್ಗ ಡಿ.ವೈ.ಎಸ್.ಪಿ ರಮೇಶ್ ಕುಮಾರ್, ಚಲನಚಿತ್ರ ನಟಿ ಕುಮಾರಿ ಭಾವನಾ ರಾಮಣ್ಣ, ನಿವೃತ್ತ ವೈದ್ಯಾಧಿಕಾರಿ ಡಾ.ಕೆ.ದೇವೇಂದ್ರಪ್ಪ, ಲೋಕೋಪಯೋಗಿ ಇಲಾಖೆ ನಿವೃತ್ತ ಕಾರ್ಯಪಾಲಕ ಅಭಿಯಂತರ ಹೆಚ್.ಶಿವಕುಮಾರ್, ಬೆಳಗಾವಿ ಜಿಲ್ಲಾ ಗಂಗಾಮತ ಸಮಾಜ ಅಧ್ಯಕ್ಷ ದಿಲೀಪ್ ಕುರಂದವಾಡೆ ಭಾಗವಹಿಸುವರು.

ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಡಿ.ಎನ್.ಬಾಲಕೃಷ್ಣ, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಆರ್.ನಾಗರಾಜಪ್ಪ, ಕೆಇಬಿ ನಿವೃತ್ತ ಅಧೀಕ್ಷಕ ಡಿ.ಶಿವಲಿಂಗಪ್ಪ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಸಹಾಯಕ ಆಯುಕ್ತ ಎಸ್.ಮಂಜುನಾಥ್, ನಿವೃತ್ತ ಸಹಾಯಕ ಕಾರ್ಯದರ್ಶಿ ಆರ್.ಪ್ರಕಾಶ್, ನಿವೃತ್ತ ಸಹ ಪ್ರಾಧ್ಯಾಪಕ ಎನ್.ಎಚ್.ರಂಗಪ್ಪ, ಸಿಂಡಿಕೇಟ್ ಬ್ಯಾಂಕ್‍ನ ನಿವೃತ್ತ ನೌಕರ ಜಿ.ರಂಗಸ್ವಾಮಿ, ಪಿಎಂಜಿಎಸ್‍ವೈ ಕಾರ್ಯಪಾಲಕ ಅಭಿಯಂತರ ಈ.ಶ್ರೀಧರ್, ಚಿತ್ರದುರ್ಗ ಉಪನೋಂದಣಾಧಿಕಾರಿ ಎಲ್.ರಾಮಕೃಷ್ಣ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ದೊರೆಸ್ವಾಮಿ, ಚಿತ್ರದುರ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ  ಅಧ್ಯಕ್ಷ ಬಿ.ಹನುಮಂತಪ್ಪ, ದಾವಣಗೆರೆ ಜಿಲ್ಲಾ ಗಂಗಾಂಬಿಕಾ ಬೆಸ್ತರ ಸಂಘದ ಅಧ್ಯಕ್ಷ ಎಂ.ಮಂಜುನಾಥ, ರಾಜ್ಯ ಗುಪ್ತವಾರ್ತೆ ನಿರ್ದೇಶಕ ಎಂ.ನಂದಗಾವ್, ಚಿತ್ರದುರ್ಗ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮುಖ್ಯಸ್ಥ ಡಾ.ಎಸ್.ಪಿ.ಬಸವಂತ್, ವೇದಾಂತ ಆಸ್ಪತ್ರೆಯ ಡಾ.ಎಚ್.ಟಿ.ತೇಜಸ್ವಿ, ಹಿರಿಯ ವಕೀಲ ಎಂ.ಭಗವಂತ, ರಾಘವೇಂದ್ರ ಮೆಡಿಕಲ ಏಜೆನ್ಸೀಸ್ ಜಿ.ಹನುಮಂತಪ್ಪ, ನಗರಸಭೆ ಸದಸ್ಯರಾದ ಆರ್.ನಾಗಮ್ಮ ಸಿ.ಜಯಣ್ಣ, ಕೆ.ಮಂಜುಳ ಕೆ.ಎಸ್.ವೇದ ಪ್ರಕಾಶ್, ಮಾಜಿ ಸದಸ್ಯರಾದ ಎನ್.ಗಾಡಿ ಮಂಜುನಾಥ, ಜೆ.ಮಹೇಶ್, ಕೆ.ಶ್ರೀನಿವಾಸ, ಎನ್.ಓಂಕಾರಪ್ಪ, ಉಮಾದೇವಿ ರಾಜು ಭಾಗವಹಿಸುವರು. ಚಿತ್ರದುರ್ಗ ಚೈತನ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಜಯಾ ಪ್ರಾಣೇಶ್ ನಿರೂಪಣೆ ಮಾಡುವರು.

ಪೂಜಾ  ಕಾರ್ಯಕ್ರಮ: ಫೆಬ್ರವರಿ.10ರಂದು ರಾತ್ರಿ 10ಕ್ಕೆ ಸ್ವಸ್ತಿ ಪುಣ್ಯವಾಚನ, ರಕ್ಷಾ ಬಂಧನ, ಮೃತ್ತಿಕ, ಸಂಗ್ರಹಣ ಅಂಕುರ-ಆಚಾರ್ಯ ಋತ್ವಿಕರಣ, ಕುಂಭ ಉಪಕುಂಭ ಆರಾಧನೆ, ಅಗ್ನಿ ಪ್ರತಿಷ್ಠ, ಜಲಾಧಿವಾಸ, ಧಾನ್ಯಾದಿವಾಸ, ಪಂಚಗವ್ಯ ಸ್ನಪನ, ಶ್ವಾಯದಿವಾಸ, ಪುಷ್ಪಾಧಿವಾಸ, ತತ್ವಾನ್ಯಾಸ ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಫೆ.11ರಂದು ಬೆಳಿಗ್ಗೆ 4 ರಿಂದ ಪುಣ್ಯಾಹವಾಚನ, ಕುಂಭಾ ಉಪಕುಂಭ ಆರಾಧನೆ, ಪ್ರಾಣ ಪ್ರತಿಷ್ಠಾಂಗ ಹೋಮ, ನಯೆನೋ ಮಿಲನ, ಪೂರ್ಣಾಹುತಿ ಮತ್ತು ಬೆಳಿಗ್ಗೆ 6ಕ್ಕೆ ಕುಂಭಾಷೇಕ ಆನಂತರ ಬೆಳಿಗ್ಗೆ 9ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಎಚ್.ಡಿ.ಪುರದ ಪ್ರಧಾನ ಅರ್ಚಕ ಶ್ರೀಕೃಷ್ಣ ಭಟ್ಟರು, ಶ್ರೀ ನರೋತ್ತಮ ಭಟ್ಟರು ಮತ್ತು ಸಂಗಡಿಗರಿಂದ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಗಂಗಾಂಭಿಕಾ ಬೆಸ್ತರ ಸಂಘ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!