in ,

ಮೇ 4 ರಂದು ಬೇಸಿಗೆ ಶಿಬಿರ ಉದ್ಘಾಟನೆ

suddione whatsapp group join

ಚಿತ್ರದುರ್ಗ,( ಏ.30)  : ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಮೇ 4ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ-2022 ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಘನ ಉಪಸ್ಥಿತಿ ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಭಾರತಿ ಆರ್.ಬಣಕಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ.ಕೆ.ಶೀಲಾ, ಬಸವರಾಜು, ಟಿ.ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಾಣಾಧಿಕಾರಿ (ಪ್ರಭಾರ) ನರಸಿಂಹರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ.ಎನ್ ಅವರು ಭಾಗವಹಿಸುವ ಎಂದು ಪ್ರಕಟಣೆ ತಿಳಿಸಿದೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಚಿತ್ರದುರ್ಗಕ್ಕೆ ಮೇ 2ರಂದು ಜಲಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ

ಮೇ.1 ರಂದು ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಅಂಬೇಡ್ಕರ್ ಮತ್ತು ಅಧ್ಯಾತ್ಮ’’ ಕೃತಿ ಬಿಡುಗಡೆ