ಚಿತ್ರದುರ್ಗ. ನ.23: 2026-27ನೇ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಹಾಗೂ ಕೋರ್ಸ್‍ನ ಅವಧಿ ಪೂರ್ಣಗೊಂಡಿರಬೇಕು. ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್‍ಪಿಸಿಐ ಮ್ಯಾಪಿಂಗ್ ಸಕ್ರಿಯವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೋರ್ಸ್ ಅವಧಿಯಲ್ಲಿ ಈ ಯೋಜನೆಯಡಿ ಒಂದು ಬಾರಿ ಮಾತ್ರ ಅರ್ಹತೆ ಇರುತ್ತದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevaone.karnataka.gov.in/services/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.







