Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸಿ | ಚಿತ್ರದುರ್ಗದಲ್ಲಿ ಎ.ಐ.ಟಿ.ಯು.ಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.21 : ಪ್ರಸಕ್ತ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಆರನೇ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಎ.ಐ.ಟಿ.ಯು.ಸಿ. ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‌ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಎ.ಐ.ಟಿ.ಯು.ಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಜನಪರವಾಗಿದ್ದರೂ ವಿವಿಧ ಯೋಜನೆಗಳಲ್ಲಿ ಸ್ಕೀಂ ವರ್ಕರ್ಸ್‍ಗಳಾಗಿ ದುಡಿಯುತ್ತಿರುವ ಮಹಿಳಾ ಸಮುದಾಯವನ್ನು ಕಡೆಗಣಿಸಲಾಗಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‍ನ ಪ್ರಿಯಾಂಕಾಗಾಂಧಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹದಿನೈದು ಸಾವಿರ ರೂ. ಹಾಗೂ ಸಹಾಯಕಿಯರಿಗೆ ಹತ್ತು ಸಾವಿರ ರೂ.ಗಳ ಗೌರವ ಧನ ನೀಡುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಗೌರವಧನ ಸಿಗುತ್ತಿಲ್ಲ. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಇಡಿ ಗಂಟು ಮೂರು ಲಕ್ಷ ರೂ.ಗಳನ್ನು ಕೊಡಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದಲ್ಲಿ ಮೀಸಲಿಟ್ಟಿದ್ದ 28 ಸಾವಿರ ಕೋಟಿ ರೂ. ಬಜೆಟ್‍ನಲ್ಲಿ ಹತ್ತು ಸಾವಿರ ರೂ.ಗಳನ್ನು ಕಡಿತಗೊಳಿಸಲಾಗಿದೆ. ಬಜೆಟ್ ಗಾತ್ರವನ್ನು 48 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಬೇಕಿತ್ತು. ಕೇಂದ್ರ ಸರ್ಕಾರ ಮೂರು ಸಾವಿರದ ಐದುನೂರು ಹಾಗೂ ರಾಜ್ಯ ಸರ್ಕಾರ ಎಂಟು ಸಾವಿರದ ಐದು ನೂರು ರೂ.ಗಳನ್ನು ಕೊಡುತ್ತಿದೆ. ಇದರಿಂದ ಜೀವನ ಮಾಡುವುದು ಕಷ್ಟ. ಯಾವುದೇ ಭದ್ರೆತೆಯಿಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ದುಡಿಯುತ್ತಿದ್ದಾರೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸ್ಕೀಂ ವರ್ಕ್‍ರ್ಸ್‍ಗಳ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಎಸ್.ಭಾಗ್ಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾಬಾಯಿ, ಖಜಾಂಚಿ ವಿನೋದಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಮ್.ಸಾವಿತ್ರಮ್ಮ, ರಾಧಮ್ಮ, ರತ್ನಮ್ಮ, ಎ.ಐ.ಟಿ.ಯು.ಸಿ. ತಾಲ್ಲೂಕು ಕಾರ್ಯದರ್ಶಿ ಈ.ಸತ್ಯಕೀರ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...