Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ

---Advertisement---

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ.

ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ ಕೊರೊನಾ ಜಾಸ್ತಿಯಾಗ್ತಾ ಇರೋದಕ್ಕೆ ಪೋಷಕರು ಆತಂಕಗೊಂಡಿದ್ದಾರೆ. ಯಾಕಂದ್ರೆ ಈ ಕೊರೊನಾ ವೈರಸ್ ಹೆಚ್ಚು ಕಾಡುವುದೇ ಮಕ್ಕಳನ್ನು. ಹೀಗಾಗಿ ಶಾಲೆಗೆ ಬರುವ ಮಕ್ಕಳಲ್ಲಿ ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡು ಬಂದರೆ ಅಂಥಹ ಮಕ್ಕಳಿಗೆ ಸ್ವಲ್ಪ ದಿನ ರಜೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶಾಲಾ ಮಕ್ಕಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕೆಮ್ಮು, ಜ್ಚರ, ನೆಗಡಿ ಇರುವ ಮಕ್ಕಳನ್ನ ಶಾಲೆಗಳಿಗೆ ಪೋಷಕರು ಕಳುಹಿಸಬಾರದು. ಈ ವೇಳೆ ಮನೆಯಲ್ಲೇ ಮಕ್ಕಳನ್ನ ಉಳಿಸಿಕೊಳ್ಳಬೇಕು. ಜೊತೆಗೆ ವಿದ್ಯಾಸಂಸ್ಥೆಗಳು ಕೂಡ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದ್ದಾರೆ. ಈಗಾಗಲೇ ಲಸಿಕೆಗೆ ಸಂಬಂಧಿಸಿದಂತೆ ಕೇಂಧರ ಸರ್ಕಾರದ ಬಳಿಯೂ ದಿನೇಶ್ ಗುಂಡೂರಾವ್ ಅವರು ಚರ್ಚೆ ನಡೆಸಿದ್ದಾರೆ. ಆದರೆ ಸದ್ಯಕ್ಕೆ ಲಸಿಕೆ ಇಲ್ಲ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಜನರೇ ಮುಂಜಾಗ್ರತೆ ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...