ಬೆಂಗಳೂರು: ಈಗಾಗಲೇ ಕಳೆದ ಎರಡು ವರ್ಷದಿಂದ ಮಕ್ಕಳಿಗೆ ಸರಿಯಾದ ಭೌತಿಕ ಶಿಕ್ಷಣ ದೊರಕದೆ ಸಾಕಷ್ಟು ಹಿಂದುಳಿದಿದ್ದಾರೆ. ಇತ್ತೀಚೆಗಷ್ಟೇ ಎಲ್ಲಾ ರೀತಿಯಲ್ಲೂ ಮಕ್ಕಳು ಆ್ಯಕ್ಟೀವ್ ಆಗಿದ್ದಾರೆ. ಆದ್ರೆ ಈ ಮಧ್ಯೆ ಕೊರೊನಾ ಮತ್ತೆ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿ ಮಾಡಿದೆ. ಮತ್ತೆ ಶಾಲಾ ಕಾಲೇಜುಗಳು ಬಂದ್ ಆಗಿ, ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಕುತ್ತು ಬೀಳುತ್ತಾ ಎಂದು ಯೋಚಿಸುತ್ತಿರುವಾಗ್ಲೇ, ಸಚಿವ ನಾಗೇಶ್ ಇಜ ಬಗ್ಗೆ ಮಾಹಿತಿ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆಮ್ಸ್ ಮೂಲಕ ಸಭೆ ನಡೆಸಿದ ಸಚಿವ ನಾಗೇಶ್, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದರು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಮೊದಲು ಮತ್ತು ಎರಡನೇ ಅಲೆಯ ತೀವ್ರತೆ ಕಂಡು ಬರುತ್ತಿಲ್ಲ. ಮಕ್ಕಳಿಗೆ ಡೇಂಜರ್ ಎಂದೇ ಹೇಳಲಾಗುತ್ತದೆ. ಆದ್ರೆ ಆ ಪ್ರಮಾಣದಲ್ಲೇನು ಪತ್ತೆಯಾಗಿಲ್ಲ. ಹೀಗಾಗಿ ಭೌತಿಕ ತರಗತಿಗಳನ್ನು ನಿಲ್ಲಿಸುವ ಅಗತ್ಯತೆ ಇಲ್ಲ ಎನ್ನಿಸುತ್ತಿದೆ.
ತಾಲೂಕು, ಸ್ಥಳೀಯ ಮಟ್ಟದಲ್ಲಿ ಕೋವಿಡ್ ಪಾಸಿಟಿವಿಟಿ ದರ ಆಧರಿಸಿ, ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‍ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‍ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.