Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 1ರಿಂದ ಫಾಸ್ಟ್ ಟ್ಯಾಗ್  ದರದಲ್ಲಿ ಹೆಚ್ಚಳ

---Advertisement---

ಫಾಸ್ಟ್ಯಾಗ್ ವಾರ್ಷಿಕ ಪಾಸ್ ಬೆಲೆ ಶೇ.2.5ರಷ್ಟು ಹೆಚ್ಚಳವಾಗಿದ್ದು, ಪರಿಷ್ಕೃತ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಖಾಸಗಿ ವಾಹನಗಳಿಗೆ ಫಾಸ್ಟ್ಯಾಗ್ ವಾರ್ಷಿಕ ಪಾಸ್‌ ಬೆಲೆ ಏಪ್ರಿಲ್ 1 ರಿಂದ ಶೇ. 2.5 ರಷ್ಟು ಹೆಚ್ಚಾಗಿ 3,075 ರೂ.ಗಳಿಗೆ ತಲುಪಲಿದೆ.

ಪ್ರಸ್ತುತ, ವಾರ್ಷಿಕ ಪಾಸ್‌ನ ಬೆಲೆ 3,000ರೂ.ಗಳಾಗಿದೆ. ಈ ಪಾಸ್ ಬಳಸಿದರೆ ಕಾರುಗಳು 200 ಟೋಲ್ ಪ್ಲಾಜಾಗಳನ್ನು ದಾಟುವವರೆಗೆ ಪ್ರತ್ಯೇಕವಾಗಿ ಟೋಲ್ ಪಾವತಿಸಬೇಕಿಲ್ಲ.ಮಾಹಿತಿಯ ಪ್ರಕಾರ ದೇಶದಲ್ಲಿ ಈಗಾಗಲೇ 50 ಲಕ್ಷಕ್ಕೂ ಹೆಚ್ಚು ವಾಹನ ಮಾಲಕರು ವಾರ್ಷಿಕ ಪಾಸ್ ಬಳಸುತ್ತಿದ್ದಾರೆ. ಹೆದ್ದಾರಿಗಳಲ್ಲಿ ಸಂಚಾರ ಸುಗಮವಾಗಲು ಮತ್ತು ಟೋಲ್ ಪಾವತಿಯನ್ನು ವೇಗಗೊಳಿಸಲು ಈ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳನ್ನು ಪ್ರತಿ ವರ್ಷವೂ ಪರಿಷ್ಕರಿಸಲಾಗುತ್ತದೆ. ಇದೇ ನಿಯಮದ ಪ್ರಕಾರ ಈ ಬಾರಿ ಫಾಸ್ಟ್ಯಾಗ್ ವಾರ್ಷಿಕ ಪಾಸ್ ದರದಲ್ಲೂ ಹೆಚ್ಚಳ ಮಾಡಲಾಗಿದೆ . ಈ ತಿಂಗಳೊಳಗೆ ರೀಚಾರ್ಜ್ ಮಾಡುವವರು 3,000ರೂ. ಪಾವತಿಸಿ ಖರೀದಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now