ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳಿಗೆ ಅನುದಾನ ನೀಡಲಾಗುತ್ತಿದೆ. ಬಜೆಟ್ ನಲ್ಲಿ 5 ಕೋಟಿ ಅನುದಾನ ನೀಡಲಾಗಿದೆ. ರೈತರಿಗೆ ಶೂನ್ಯ ಬಡ್ಡಿ ದರದ ಸಾಲ ನೀಡಲು ನಿರ್ಧಾರ.
ಸರ್ಕಾರಿ ಅನುವಾನಿತ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ. ಈ ಬಾರಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಮುಟ್ಟೆ, ಶೇಂಗಾ, ಚಿಕ್ಕಿ, ಬಾಳೆಹಣ್ಣು ನೀಡಲು ನಿರ್ಧಾರ. ಒಟ್ಟು 60 ಲಕ್ಷ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.
ಇನ್ನು ಅನ್ನಭಾಗ್ಯ ಯೋಜನೆ ಜಾರಿಗೆ ಪರ್ಯಾಯ ಮಾರ್ಗ ಹುಡುಕಲಾಗುತ್ತಿದೆ. 4.42 ಕೋಟಿ ಬಿಪಿಎಲ್ ಕುಟುಂಬಗಳಿಗೆ ಅನ್ನ ಭಾಗ್ಯ ಯೋಜನೆ ಸಿಗಲಿದೆ. ಅನ್ನಭಾಗ್ಯ ಯೋಜನೆಗೆ 10,000 ಕೋಟಿ, ಗೃಹಲಕ್ಷ್ಮಿ ಯೋಜನೆ ಜಾರಿಗೆ 30,000 ಕೋಟಿ ಮೀಸಲಿಡಲಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಏನೇಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ, 92 ಕೋಟಿ ರೂಪಾಯಿ ವೆಚ್ಚದಲ್ಲಿ ಡಯಾಲಿಸಿಸ್ ಸೆಂಟರ್ ಗಳನ್ನು ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಮಾಡಲಾಗಯತ್ತಿದೆ.