SC, ST ಮೀಸಲಾತಿ ಹೆಚ್ಚಳ: ಕಾಂಗ್ರೆಸ್ ಬದ್ಧತೆಗೆ ಸಲ್ಲುವ ಶ್ರೇಯಸ್ಸು : ಹೆಚ್.ಸಿ. ಮಹದೇವಪ್ಪ

1 Min Read

ಬೆಂಗಳೂರು: ಇಂದು ಸರ್ವ ಪಕ್ಷಗಳ ಸಭೆಯಲ್ಲಿ SC/ST ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟ್ವೀಟ್ ಮಾಡಿ, ಸ್ವಾಗತಿಸಿದ್ದಾರೆ.

SC ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15 ರಿಂದ ಶೇ 17 ಕ್ಕೆ ಹಾಗೂ ST ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ SC/ST ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ಕಾರಣಕ್ಕಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಯಿತು.

terms of reference ಅನ್ನು ಹಾಕಿದ ನಂತರದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಇಡೀ ರಾಜ್ಯವನ್ನು ಪ್ರವಾಸ ಮಾಡಿ, ವಸ್ತು ನಿಷ್ಠವಾದ ವರದಿಯನ್ನು ಸಿದ್ದಪಡಿಸಿ ಅದನ್ನು ಸರ್ಕಾರಕ್ಕೆ ಸಲ್ಲಿಸಿದರು. ನಂತರ ಈ ವರದಿಯನ್ನು ಮತ್ತೊಮ್ಮೆ ಕೂಲಂಕುಷವಾಗಿ ವಿಶ್ಲೇಷಣೆ ಮಾಡಿ ಅದನ್ನು ಜಾರಿಗೊಳಿಸುವ ಹೊತ್ತಿಗೆ ಸರ್ಕಾರ ಬದಲಾಯಿತು.

ಆದರೆ ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಕಾಳಜಿ ವಹಿಸಿ ಸಿದ್ದಪಡಿಸಲಾದ ನಾಗಮೋಹನ್ ದಾಸ್ ಅವರ ವರದಿಯನ್ನು ಆಧರಿಸಿ SC/ ST ಮೀಸಲಾತಿಯನ್ನು ಹೆಚ್ಚಳ ಮಾಡುವುದಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಸಮ್ಮತಿ ದೊರೆತಿರುವುದು ನಿಜಕ್ಕೂ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದ ಕಾಂಗ್ರೆಸ್ ನ ಬದ್ಧತೆಗೆ ಸಲ್ಲುವಂತಹ ಶ್ರೇಯವಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *