Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೆಚ್ಚಿದ ಸೌಲಭ್ಯ : ರೂ.2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

---Advertisement---

 

ಚಿತ್ರದುರ್ಗ. ಜುಲೈ. 30: ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು. ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, ಕೆಆರ್‍ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment