ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಡಿ.10): ನಿಸ್ವಾರ್ಥ ಸೇವೆಯ ಜೊತೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಪ್ರೌಢಶಾಲಾ ಶಿಕ್ಷಕರುಗಳಿಗೆ ಹಾಗೂ ಕಿರಿಯ ರೆಡ್‍ಕ್ರಾಸ್ ಕೌನ್ಸಿಲರ್‍ಗಳಿಗೆ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವೈ.ಆರ್.ಆದಿಶೇಷ ರೋಟರಿ ಬಾಲಭವನದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹಾಗೂ ಕಿರಿಯ ರೆಡ್‍ಕ್ರಾಸ್ ಕೌನ್ಸಿಲ್‍ರಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಗಾಟಿಸಿ ಮಾತನಾಡಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ರಕ್ತದಾನ, ಉಚಿತ ಆರೋಗ್ಯ ತರಬೇತಿ ಶಿಬಿರಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದೆ. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿರುವ ನೀವುಗಳು ಸಮಾಜ ಸೇವೆಯ ಮೂಲಕ ಪರೋಪಕಾರದ ಗುಣ ಬೆಳೆಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ ವೈಯಕ್ತಿಕ ಸ್ವಚ್ಚತೆ, ಪರಿಸರ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರಿಂದ ರೋಗಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದು ಕಡಿಮೆಯಾಗುತ್ತದೆ. ಮಾರಕ ರೋಗಗಳ ಕುರಿತು ಯುವಜನತೆಯಲ್ಲಿ ಅರಿವು ಮೂಡಿಸುತ್ತ ರಕ್ತದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.
ರಾಷ್ಟ್ರೀಯ ತರಬೇತುದಾರ ಡಾ.ವಿ.ಎಲ್.ಎಸ್.ಕುಮಾರ್ ಪ್ರಥಮ ಚಿಕಿತ್ಸೆ ಸಿ.ಪಿ.ಆರ್.ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಉಪನ್ಯಾಸ ನೀಡಿದರು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನೀಲಕಂಠಾಚಾರ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರಾಜ್ಯ ಕಿರಿಯ ರೆಡ್‍ಕ್ರಾಸ್ ಉಪ ಸಮಿತಿಯ ಅರುಣ್‍ಕುಮಾರ್, ಶ್ರೀಮತಿ ಗಾಯತ್ರಿ ಶಿವರಾಂ, ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಾರ್ಯದರ್ಶಿ ಮಜಹರ್‍ಉಲ್ಲಾ, ಯುವ ರೆಡ್‍ಕ್ರಾಸ್ ಸಂಯೋಜಕರಾದ
ಶ್ರೀನಿವಾಸ್ ಮಳಲಿ, ಭರತ್ ಶಿವಕುಮಾರ್ ವೇದಿಕೆಯಲ್ಲಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…