Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IND vs ENG: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು…

---Advertisement---

ಸುದ್ದಿಒನ್ : ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಶಕ್ತಿ ಪ್ರದರ್ಶನ ಮಾಡಿದೆ. 100 ರನ್‌ಗಳಿಂದ ಗೆದ್ದು ಟೂರ್ನಿಯಲ್ಲಿ ಸತತ ಆರನೇ ಜಯ ದಾಖಲಿಸಿದೆ. 230 ರನ್‌ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಇಂಗ್ಲೆಂಡ್ 129 ರನ್‌ಗಳಿಗೆ ಆಲೌಟಾಯಿತು. ಮತ್ತೊಂದೆಡೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮೀಸ್ ಗೆ ಲಗ್ಗೆ ಇಡುವುದು ಬಹುತೇಕ ಖಚಿತವಾಗಿದೆ. ಟೂರ್ನಿಯಲ್ಲಿ ಐದನೇ ಸೋಲು ಕಂಡಿರುವ ಇಂಗ್ಲೆಂಡ್ ಸೆಮಿಸ್ ಅವಕಾಶವನ್ನು ಬಹುತೇಕ ಕಳೆದುಕೊಂಡಂತಾಗಿದೆ.

ಇಂಗ್ಲೆಂಡ್ 34.5 ಓವರ್‌ಗಳಲ್ಲಿ 129 ರನ್‌ಗಳಿಗೆ ಆಲೌಟಾಯಿತು. ಭಾರತದ ಬೌಲರ್ ಗಳ ಪೈಕಿ ಮೊಹಮ್ಮದ್ ಶಮಿ ಉತ್ತಮ ಬೌಲಿಂಗ್ ಮಾಡುವ ಮೂಲಕ ಇಂಗ್ಲೆಂಡ್ ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಶಮಿ 22 ರನ್ ನೀಡಿ 4 ವಿಕೆಟ್ ಪಡೆದರು. ಬುಮ್ರಾ 3, ಕುಲದೀಪ್ ಯಾದವ್ 2 ವಿಕೆಟ್ ಪಡೆದರು.  ಜವಾಬ್ದಾರಿಯುತ ಇನಿಂಗ್ಸ್‌ ಆಡಿದ ರೋಹಿತ್‌ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...