Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಲ್ಕನೆ ದಿನಕ್ಕೆ ಕಾಲಿಟ್ಟ ನಿವೇಶನ ಮತ್ತು ವಸತಿ ರಹಿತರ ಅನಿರ್ಧಿಷ್ಟಾವಧಿ ಮುಷ್ಕರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ, ಕಮ್ಯುನಿಸ್ಟ್ ಪಕ್ಷದ ಸಹಯೋಗದೊಂದಿಗೆ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಶುಕ್ರವಾರ ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ.

ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಸತ್ಯಾಗ್ರಹ ಉದ್ದೇಶಿಸಿ ಮಾತನಾಡುತ್ತ ಬಡವರಿಗೆ ನಿವೇಶನ ಮತ್ತು ವಸತಿಗಾಗಿ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಜಿಲ್ಲಾಡಳಿತ ಇದುವರೆವಿಗೂ ಭೂಮಿಯನ್ನು ಗುರುತಿಸಿಲ್ಲ. ಜಿಲ್ಲೆಯಲ್ಲಿ ಒಂದು ಲಕ್ಷ ಮೂರು ಸಾವಿರದ 824 ಬಡವರಿಗೆ ನಿವೇಶನವಾಗಲಿ ಸ್ವಂತ ಮನೆಯಾಗಲಿ ಇಲ್ಲ. ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವುದರಿಂದ ಜೀವನ ಕಷ್ಟವಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಗುತ್ತಿಲ್ಲ. ಸರ್ಕಾರ ಕೂಡಲೆ ಭೂಮಿಯನ್ನು ಕಾಯ್ದಿರಿಸಿ ಬಡವರಿಗೆ ಮನೆಗಳನ್ನು ಕಟ್ಟಿಸಿಕೊಳ್ಳಲು ಸಹಾಯ ಧನವನ್ನು ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಎಚ್ಚರಿಸಿದರು.

ಸಿಪಿಐ. ರಾಜ್ಯ ಕಾರ್ಯದರ್ಶಿ ಸಾ.ತಿ.ಸುಂದರೇಶ್, ಕಾಂ.ಜಾಫರ್‍ಷರೀಫ್, ಕಾಂ.ಸತ್ಯಕೀರ್ತಿ, ಕಾಂ.ಪೆನ್ನಯ್ಯ, ಕಾಂ.ಅಮಿನಾಬಿ, ಕಾಂ.ಸಿ.ಎನ್.ಕುಮಾರಸ್ವಾಮಿ, ಕಾಂ.ತಿಪ್ಪಮ್ಮ ಸೇರಿದಂತೆ ನೂರಾರು ಮಹಿಳೆಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now