Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಾತಂತ್ರ್ಯೋತ್ಸವ ಸಂಭ್ರಮ: ಆಗಸ್ಟ್ ಪೂರ್ತಿ ಕನ್ನಡ ಪುಸ್ತಕಗಳಿಗೆ ಶೇ.50 ರಿಯಾಯಿತಿ ಘೋಷಣೆ

---Advertisement---

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಓದುಗರಿಗೆ ವಿಶೇಷ ಕೊಡುಗೆಯನ್ನು ಘೋಷಿಸಿದೆ. 2026ರ ಆಗಸ್ಟ್ ತಿಂಗಳ ಪೂರ್ತಿ ಪ್ರಾಧಿಕಾರ ಪ್ರಕಟಿಸಿರುವ ಎಲ್ಲಾ ಕನ್ನಡ ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಈ ವಿಶೇಷ ರಿಯಾಯಿತಿ ಬೆಂಗಳೂರಿನ ಕನ್ನಡ ಭವನದಲ್ಲಿರುವ ‘ಸಿರಿಗನ್ನಡ’ ಪುಸ್ತಕ ಮಳಿಗೆ, ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಆರಂಭಿಸಿರುವ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರಲಿದೆ.ಇದರ ಜೊತೆಗೆ, ಕನ್ನಡ ಪುಸ್ತಕಗಳನ್ನು ಆನ್‌ಲೈನ್‌ನಲ್ಲಿಯೂ ರಿಯಾಯಿತಿ ದರದಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನ ‘ಆನ್‌ಲೈನ್ ಪುಸ್ತಕ ಖರೀದಿ’ ವಿಭಾಗದಲ್ಲಿ ಶೇ.50 ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಕನ್ನಡ ಸಾಹಿತ್ಯದ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರವು ಇದುವರೆಗೆ ಸುಮಾರು 769 ಶೀರ್ಷಿಕೆಗಳ ಪುಸ್ತಕಗಳನ್ನು ಪ್ರಕಟಿಸಿದೆ. ವ್ಯಕ್ತಿಚಿತ್ರಗಳು, ನಾಟಕಗಳು, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಅಲೆಮಾರಿ ಸಮುದಾಯ, ವೈದ್ಯಕೀಯ, ಪರಿಸರ, ಕೃಷಿ ಸೇರಿದಂತೆ ಹಲವು ವಿಷಯಾಧಾರಿತ ಕೃತಿಗಳನ್ನು ಪ್ರಾಧಿಕಾರ ಪ್ರಕಟಿಸಿದೆ.

ಮೌಲಿಕ ಹಾಗೂ ಪ್ರಾಜ್ಞರಿಂದ ರಚಿತವಾದ ಈ ಅಮೂಲ್ಯ ಕೃತಿಗಳು ಹೆಚ್ಚು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ತಲುಪಬೇಕು ಎಂಬ ಉದ್ದೇಶದಿಂದ ಈ ವಿಶೇಷ ರಿಯಾಯಿತಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಪ್ರಾಧಿಕಾರದ ರಿಜಿಸ್ಟ್ರಾರ್ ಕಿರಣ್ ಕುಮಾರ್ ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now