ಬೆಂಗಳೂರು.ಆಗಸ್ಟ್.5 : ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ತಿಳಿಸಿದ್ದಾರೆ.
ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಆಗಸ್ಟ್ 05 2026 ರಿಂದ ಆಗಸ್ಟ್ 13 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.


ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









