ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, ಆ.14: ಜಿಲ್ಲಾಡಳಿತದ ವತಿಯಿಂದ ಇದೇ ಆಗಸ್ಟ್ 15ರಂದು ಆಚರಿಸುವ ಭಾರತ ಸ್ವಾತಂತ್ರ್ಯೋತ್ಸವ ಸಮಾರಂಭದ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾರತ ಸ್ವಾತಂತ್ರ್ಯೋತ್ಸವ ಸಮಾರಂಭದ ಅಂಗವಾಗಿ ಬೆಳಿಗ್ಗೆ 7.30ಕ್ಕೆ ಸರಿಯಾಗಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ರಾಷ್ಟ್ರಧ್ವಜಾರೋಹಣ ಮಾಡುವರು.
ಜಿಲ್ಲಾ ಕಚೇರಿ ಸಂಕೀರ್ಣದಲ್ಲಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಬೆಳಿಗ್ಗೆ 7.30 ಗಂಟೆಗಿಂತ ಮುಂಚಿತವಾಗಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿರುವ ಧ್ವಜಸ್ತಂಭದ ಬಳಿ ಸಮಾವೇಶಗೊಳ್ಳಬೇಕು.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸಂಜೆ 5.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಸ್ವಾತಂತ್ರ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿ, ನೌಕರರ ಮೇಲೆ ನಿಯಮಾನುಸಾರ ಸರ್ಕಾರದ ಮಾರ್ಗಸೂಚಿಗಳನ್ವಯ ಶಿಸ್ತುಕ್ರಮಕೈಗೊಳ್ಳಲಾವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.