Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಲ್ಲಿ ಇದೇ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’

---Advertisement---

ದೆಹಲಿ.ಆಗಸ್ಟ್.11: ದೇಶದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಈ ಬಾರಿ ಮತ್ತಷ್ಟು ವಿಶೇಷ ಮೆರುಗು ದೊರೆಯಲಿದೆ. ಇದೇ ಮೊದಲ ಬಾರಿಗೆ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಆವರಣದಿಂದ ‘ವಂದೇ ಮಾತರಂ’ ಗೀತೆಯನ್ನು ಹಾಡಲು ಸಿದ್ಧತೆ ನಡೆಸಲಾಗಿದೆ.

ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಮುಖ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಆವರಣದಿಂದ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ರಾಷ್ಟ್ರಗೀತೆಗೆ ಮುನ್ನ ‘ವಂದೇ ಮಾತರಂ’

ಈ ವರ್ಷದ ಕಾರ್ಯಕ್ರಮದಲ್ಲಿ ಮತ್ತೊಂದು ಮಹತ್ವದ ಬದಲಾವಣೆ ಮಾಡಲಾಗಿದೆ. ‘ಜನ ಗಣ ಮನ’ ರಾಷ್ಟ್ರಗೀತೆಗೆ ಮುನ್ನ ‘ವಂದೇ ಮಾತರಂ’ ಗೀತೆಯನ್ನು ಸಾಮೂಹಿಕವಾಗಿ ಹಾಡಲಾಗುತ್ತದೆ. ಕೆಂಪುಕೋಟೆಯ ಪ್ರಾಂಗಣದಲ್ಲಿ ನಡೆಯಲಿರುವ ಈ ಗಾಯನದಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಲಿದ್ದಾರೆ.

ಸುಮಾರು 27,000ಕ್ಕೂ ಹೆಚ್ಚು ಮಂದಿ ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ‘ವಂದೇ ಮಾತರಂ’ ಗಾಯನದ ವೇಳೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

‘ವಂದೇ ಮಾತರಂ’ಗೆ 150 ವರ್ಷ

ಈ ವರ್ಷ ‘ವಂದೇ ಮಾತರಂ’ ರಚನೆಯ 150ನೇ ವರ್ಷಾಚರಣೆಯೂ ನಡೆಯುತ್ತಿದೆ. ದೇಶಾದ್ಯಂತ 2025ರ ನವೆಂಬರ್‌ನಿಂದ ಆರಂಭವಾಗಿರುವ ವರ್ಷವಿಡೀ ನಡೆಯುವ ಕಾರ್ಯಕ್ರಮಗಳ ನಾಲ್ಕು ಹಂತಗಳಲ್ಲಿ ಆಗಸ್ಟ್ 7ರಿಂದ 15ರವರೆಗಿನ ಮೂರನೇ ಹಂತವನ್ನು ಸ್ವಾತಂತ್ರ್ಯೋತ್ಸವದೊಂದಿಗೆ ಆಯೋಜಿಸಲಾಗಿದೆ.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶಭಕ್ತಿಯ ಸಂಕೇತವಾಗಿ ಮಹತ್ವ ಪಡೆದಿರುವ ‘ವಂದೇ ಮಾತರಂ’ಗೆ ಈ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ವಿಶೇಷ ಗೌರವ ನೀಡಲಾಗುತ್ತಿದೆ.

Join WhatsApp

Join Now

Join Telegram

Join Now